ವಿಶ್ವದ 5 ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗಳು

By Jayaraj
Nov 13, 2024

Hindustan Times
Kannada

ಭಾರತದಲ್ಲಿ ಕ್ರಿಕೆಟ್ ಜನಪ್ರಿಯ ಕ್ರೀಡೆ. ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸಲು ಸಾವಿರಾರು ಜನರು ಕ್ರೀಡಾಂಗಣಕ್ಕೆ ಆಗಮಿಸುತ್ತಾರೆ.

ಭಾರತದಲ್ಲಿ ವಿಶ್ವದಲ್ಲೇ ಅತಿ ಹೆಚ್ಚಿನ ಸಂಖ್ಯೆ ಕ್ರಿಕೆಟ್‌ ಸ್ಟೇಡಿಯಂಗಳಿವೆ. ಈಗ ನಾವು ನಿಮಗೆ ವಿಶ್ವದ 5 ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂಗಳ ಬಗ್ಗೆ ನೋಡೋಣ.

ಅಹಮದಾಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣವು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಇಲ್ಲಿ 1.32 ಲಕ್ಷ ಪ್ರೇಕ್ಷಕರು ಕುಳಿತುಕೊಳ್ಳುವ ಆಸನ ಸಾಮರ್ಥ್ಯವಿದೆ.

ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ಎರಡನೇ ಸ್ಥಾನದಲ್ಲಿದೆ. ಇಲ್ಲಿ 1 ಲಕ್ಷ ಮಂದಿ ಏಕಕಾಲಕ್ಕೆ ಪಂದ್ಯ ವೀಕ್ಷಿಸಬಹುದಾಗಿದೆ.

ಕೋಲ್ಕತ್ತಾದಲ್ಲಿರುವ ಈಡನ್ ಗಾರ್ಡನ್ ವಿಶ್ವದ ಮೂರನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿದೆ. ಈ ಕ್ರೀಡಾಂಗಣದಲ್ಲಿ ಏಕಕಾಲಕ್ಕೆ 68 ಸಾವಿರ ಮಂದಿ ಪಂದ್ಯ ವೀಕ್ಷಿಸಬಹುದು.

ಛತ್ತೀಸ್‌ಗಢದ ರಾಯ್‌ಪುರದಲ್ಲಿರುವ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ವಿಶ್ವದ ನಾಲ್ಕನೇ ಅತಿ ದೊಡ್ಡ ಕ್ರೀಡಾಂಗಣವಾಗಿದೆ.

ಈ ಕ್ರೀಡಾಂಗಣದಲ್ಲಿ ಸುಮಾರು 66 ಸಾವಿರ ಪ್ರೇಕ್ಷಕರು ಏಕಕಾಲದಲ್ಲಿ ಪಂದ್ಯ ಆನಂದಿಸಬಹುದು. ಕ್ರೀಡಾಂಗಣವನ್ನು 2008ರಲ್ಲಿ ನಿರ್ಮಿಸಲಾಯಿತು.

ಆಸ್ಟ್ರೇಲಿಯಾದ ಪರ್ತ್ ಸ್ಟೇಡಿಯಂ ಐದನೇ ಸ್ಥಾನದಲ್ಲಿದೆ. ಈ ಕ್ರೀಡಾಂಗಣದಲ್ಲಿ 61 ಸಾವಿರ ಪ್ರೇಕ್ಷಕರು ಏಕಕಾಲದಲ್ಲಿ ಪಂದ್ಯ ಆನಂದಿಸಬಹುದು.

ಭಾರತದ ದಿಗ್ಗಜ ಕ್ರಿಕೆಟಿಗರ ನೆಚ್ಚಿನ ಹವ್ಯಾಸಗಳು