ಚಾಂಪಿಯನ್ಸ್ ಟ್ರೋಫಿ ಗೆದ್ದ ಟೀಮ್ ಇಂಡಿಯಾಗೆ ಬಿಸಿಸಿಐ ಭರ್ಜರಿ ಬಹುಮಾನ

By Jayaraj
Mar 20, 2025

Hindustan Times
Kannada

2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ಚಾಂಪಿಯನ್‌ ಆಗಿ ಹೊರಹೊಮ್ಮಿತು. ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆದ್ದು ಬೀಗಿತು.

ಇದೀಗ ಟ್ರೋಫಿ ಗೆದ್ದ ನಂತರ ಭಾರತ ತಂಡಕ್ಕೆ ಬಿಸಿಸಿಐ 58 ಕೋಟಿ ರೂ. ನಗದು ಬಹುಮಾನವನ್ನು ಘೋಷಿಸಿದೆ.

ಈ ನಗದು ಬಹುಮಾನವು ತಂಡದ ಆಟಗಾರರು, ಕೋಚಿಂಗ್ ಮತ್ತು ಸಹಾಯಕ ಸಿಬ್ಬಂದಿ ಹಾಗೂ ಆಯ್ಕೆ ಸಮಿತಿಯ ಸದಸ್ಯರಿಗೂ ಸಿಗಲಿದೆ.

ಈ ಬಗ್ಗೆ ಹೇಳಿಕೆ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಹೇಳಿಕೆ ನೀಡಿದ್ದಾರೆ.

ಟೂರ್ನಿಯಲ್ಲಿ ಭಾರತ ತಂಡವು ಅಜೇಯವಾಗಿತ್ತು. ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆದ್ದು ಫೈನಲ್‌ ಪ್ರವೇಶಿಸಿತು.

ಫೈನಲ್‌ನಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಕಿವೀಸ್‌ 7 ವಿಕೆಟ್ ನಷ್ಟಕ್ಕೆ 251 ರನ್‌ ಗಳಿಸಿತು.

252 ರನ್‌ಗಳ ಗುರಿ ಬೆನ್ನತ್ತಿದ ಭಾರತ, 49 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 254 ರನ್ ಗಳಿಸಿತು. ಭಾರತ 4 ವಿಕೆಟ್‌ಗಳ ಜಯ ಸಾಧಿಸಿತು.

ಭಾರತ ಪುರುಷರ ತಂಡವು ಕೊನೆಯ ಮೂರು ಪ್ರಮುಖ ಐಸಿಸಿ ಟೂರ್ನಿಗಳಲ್ಲಿ ಎರಡರಲ್ಲಿ ಅಜೇಯವಾಗಿ ಗೆದ್ದು ಬೀಗಿದೆ.

All Photo: ANI

ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರಜತ್‌ ಪಾಟೀದಾರ್‌