ಬಾರ್ಡರ್-ಗವಾಸ್ಕರ್ ಟ್ರೋಫಿ: ಹೆಚ್ಚು ವಿಕೆಟ್ ಪಡೆದ 8 ಬೌಲರ್‌ಗಳು

By Jayaraj
Nov 18, 2024

Hindustan Times
Kannada

1996ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡೆಯುತ್ತಿದೆ. ಈ ಬಾರಿಯ ಸರಣಿ ನವೆಂಬರ್ 22ರಿಂದ ಆರಂಭವಾಗುತ್ತಿದೆ.

ಇಂಡೋ-ಆಸೀಸ್ ಟೆಸ್ಟ್ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 8 ಬೌಲರ್‌ಗಳು ಯಾರು ಎಂಬುದನ್ನು ತಿಳಿಯೋಣ.

ಆಸ್ಟ್ರೇಲಿಯಾದ ಬೌಲರ್ ನಾಥನ್ ಲಿಯಾನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. 26 ಪಂದ್ಯಗಳ 47 ಇನ್ನಿಂಗ್ಸ್‌ಗಳಲ್ಲಿ ಒಟ್ಟು 116 ವಿಕೆಟ್‌ ಕಬಳಿಸಿದ್ದಾರೆ.

ಎರಡನೇ ಸ್ಥಾನದಲ್ಲಿ ಭಾರತದ ಸ್ಪಿನ್ನರ್ ಆರ್ ಅಶ್ವಿನ್ ಇದ್ದಾರೆ. ಅವರು 22 ಪಂದ್ಯಗಳ 42 ಇನ್ನಿಂಗ್ಸ್‌ಗಳಲ್ಲಿ ಒಟ್ಟು 114 ವಿಕೆಟ್‌ ಪಡೆದಿದ್ದಾರೆ.

ಮೂರನೇ ಸ್ಥಾನದಲ್ಲಿರುವ ಮಾಜಿ ಸ್ಪಿನ್ನರ್ ಅನಿಲ್ ಕುಂಬ್ಳೆ 20 ಪಂದ್ಯಗಳ 38 ಇನ್ನಿಂಗ್ಸ್‌ಗಳಲ್ಲಿ 111 ವಿಕೆಟ್ ಪಡೆದಿದ್ದಾರೆ.

ನಾಲ್ಕನೇ ಸ್ಥಾನದಲ್ಲಿ ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ 18 ಪಂದ್ಯಗಳ 35 ಇನ್ನಿಂಗ್ಸ್‌ಗಳಲ್ಲಿ ಒಟ್ಟು 95 ವಿಕೆಟ್ ಪಡೆದಿದ್ದಾರೆ.

ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಐದನೇ ಸ್ಥಾನದಲ್ಲಿದ್ದಾರೆ. 16 ಪಂದ್ಯಗಳ 30 ಇನ್ನಿಂಗ್ಸ್‌ಗಳಲ್ಲಿ 85 ವಿಕೆಟ್‌ ಕಬಳಿಸಿದ್ದಾರೆ.

ಆರನೇ ಸ್ಥಾನದಲ್ಲಿರುವ ಭಾರತದ ಮಾಜಿ ವೇಗಿ ಜಹೀರ್ ಖಾನ್ 19 ಪಂದ್ಯಗಳ 34 ಇನ್ನಿಂಗ್ಸ್‌ಗಳಲ್ಲಿ 61 ವಿಕೆಟ್ ಪಡೆದಿದ್ದಾರೆ.

ಏಳನೇ ಸ್ಥಾನದಲ್ಲಿರುವ ಭಾರತದ ಬೌಲರ್ ಇಶಾಂತ್ ಶರ್ಮಾ 25 ಪಂದ್ಯಗಳ 46 ಇನ್ನಿಂಗ್ಸ್‌ಗಳಲ್ಲಿ 59 ವಿಕೆಟ್ ಪಡೆದಿದ್ದಾರೆ.

ಆಸ್ಟ್ರೇಲಿಯದ ಮಾಜಿ ಬೌಲರ್ ಬ್ರೆಟ್ ಲೀ ಎಂಟನೇ ಸ್ಥಾನದಲ್ಲಿದ್ದಾರೆ. ಬ್ರೆಟ್ 12 ಪಂದ್ಯಗಳ 24 ಇನ್ನಿಂಗ್ಸ್‌ಗಳಲ್ಲಿ 53 ವಿಕೆಟ್‌ ಪಡೆದಿದ್ದಾರೆ.

ಭಾರತದ ದೇಸಿ ತಳಿ ರಾಸುಗಳ ಬಗ್ಗೆ ಗೊತ್ತೆ ಇದು ಮಹಾರಾಷ್ಟ್ರದ ಲಾಲ್‌ ಕಠಾರಿ