ಇತಿಹಾಸ ಬರೆದ ತ್ರಿಶಾ; ಅಂಡರ್-19 ವಿಶ್ವಕಪ್‌ನಲ್ಲಿ ಮೊದಲ ಶತಕ

By Jayaraj
Jan 28, 2025

Hindustan Times
Kannada

ಭಾರತ ಅಂಡರ್‌ 19 ತಂಡದ ಆರಂಭಿಕ ಆಟಗಾರ್ತಿ ಗೊಂಗಾಡಿ ತ್ರಿಶಾ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಮಹಿಳಾ ಅಂಡರ್-19 ಟಿ20 ವಿಶ್ವಕಪ್ ಇತಿಹಾಸದಲ್ಲಿ ಶತಕ ಸಿಡಿಸಿದ ಮೊದಲ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಸ್ಕಾಟ್ಲೆಂಡ್ ವಿರುದ್ಧದ ಸೂಪರ್ ಸಿಕ್ಸ್ ಪಂದ್ಯದಲ್ಲಿ ಕೇವಲ 53 ಎಸೆತಗಳಲ್ಲಿ ತ್ರಿಶಾ ಶತಕ ಬಾರಿಸಿದರು.

59 ಎಸೆತಗಳಲ್ಲಿ 110 ರನ್ ಗಳಿಸಿ ಅಜೇಯರಾಗಿ ಉಳಿದರು. ಅವರ ಇನ್ನಿಂಗ್ಸ್‌ನಲ್ಲಿ 13 ಬೌಂಡರಿ ಹಾಗೂ 4 ಸಿಕ್ಸರ್‌ಗಳು ಸೇರಿವೆ.

ತ್ರಿಶಾ ಹಾಗೂ ಸಾನಿಕಾ ಚಾಲ್ಕೆ ಮೊದಲ ವಿಕೆಟ್‌ಗೆ 147 ರನ್‌ಗಳ ಜೊತೆಯಾಟವಾಡಿದರು. ಮಹಿಳಾ ಅಂಡರ್ 19 ಟಿ20 ವಿಶ್ವಕಪ್‌ನಲ್ಲಿ ಯಾವುದೇ ವಿಕೆಟ್‌ಗೆ ಅತ್ಯಧಿಕ ಜೊತೆಯಾಟವಾಗಿದೆ.

ಭಾರತ ನಿಗದಿತ 20 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 208 ರನ್ ಗಳಿಸಿತು.

ಇದಕ್ಕೆ ಪ್ರತಿಯಾಗಿ ಸ್ಕಾಟ್ಲೆಂಡ್ 14 ಓವರ್‌ಗಳಲ್ಲಿ 58 ರನ್‌ಗಳಿಗೆ ಆಲೌಟ್‌ ಆಯ್ತು.

ಭಾರತ ತಂಡ ಅಂಡರ್‌ 19 ವಿಶ್ವಕಪ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದೆ.

BCCI

ಕೆಲಸ ಮಾಡುವಾಗ ಉಲ್ಲಾಸ ಹೆಚ್ಚಿಸಲು ಸರಳ ಡೆಸ್ಕ್ ವ್ಯಾಯಾಮ

PEXELS