ಬಿಸಿಸಿಐ ಪ್ರಶಸ್ತಿ ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ಆಟಗಾರರು

By Jayaraj
Feb 02, 2025

Hindustan Times
Kannada

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶನಿವಾರ(ಫೆ.1) ನಮನ್ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಿತ್ತು.

ಕಾರ್ಯಕ್ರಮದಲ್ಲಿ ಟೀಮ್ ಇಂಡಿಯಾ ಪುರುಷ ಹಾಗೂ ಮಹಿಳಾ ತಂಡದ ಆಟಗಾರರು ಪಾಲ್ಗೊಂಡರು.

ನಾಯಕ ರೋಹಿತ್ ಶರ್ಮಾ, ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ, ಮಹಿಳಾ ಕ್ರಿಕೆಟಿಗರಾದ ಸ್ಮೃತಿ ಮಂಧಾನ ಹಾಗೂ ಜೆಮಿಮಾ ರೊಡ್ರಿಗಸ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು.

ರೋಹಿತ್ ಮತ್ತು ಹಾರ್ದಿಕ್ ಜೊತೆಗೆ, ಸ್ಮೃತಿ ಮಂಧಾನ ಮತ್ತು ಜೆಮಿಮಾ ರೊಡ್ರಿಗಸ್ ಕೂಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. 

ನಾಲ್ವರು ಆಟಗಾರರು ಪರಸ್ಪರ ವಿಭಿನ್ನ ರೀತಿಯ ಪ್ರಶ್ನೆಗಳನ್ನು ಕೇಳಿಕೊಂಡರು. ಅದಕ್ಕೆ ಉತ್ತರಗಳೂ ಬಂದವು.

ಕಾರ್ಯಕ್ರಮದಲ್ಲಿ ಸಚಿನ್ ತೆಂಡೂಲ್ಕರ್ ಅವರಿಗೆ 'ಸಿಕೆ ನಾಯುಡು ಜೀವಮಾನ ಸಾಧನೆ ಪ್ರಶಸ್ತಿ' ನೀಡಲಾಯ್ತು.

ಜಸ್ಪ್ರೀತ್ ಬುಮ್ರಾ ಅವರಿಗೆ 'ಪಾಲಿ ಉಮ್ರಿಗರ್ ಪ್ರಶಸ್ತಿ' ನೀಡಿ ಗೌರವಿಸಲಾಯಿತು.

ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾದ ಆರ್ ಅಶ್ವಿನ್ ಅವರಿಗೆ ಬಿಸಿಸಿಐ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿತು..

ಸ್ಮೃತಿ ಮಂಧಾನಾ ಅವರಿಗೆ ಅತ್ಯುತ್ತಮ ಅಂತಾರಾಷ್ಟ್ರೀಯ ಕ್ರಿಕೆಟಿಗ (ಮಹಿಳಾ ವಿಭಾಗ) ಪ್ರಶಸ್ತಿ ಮತ್ತು ಸರ್ಫರಾಜ್ ಖಾನ್ ಅವರಿಗೆ ಅತ್ಯುತ್ತಮ ಅಂತಾರಾಷ್ಟ್ರೀಯ ಪದಾರ್ಪಣೆ ಪ್ರಶಸ್ತಿ ನೀಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆಲವು ದೇಶೀಯ ಕ್ರಿಕೆಟಿಗರನ್ನು ಸಹ ಗೌರವಿಸಲಾಯಿತು.

ಮೈಗ್ರೇನ್ ಕೇವಲ ತಲೆನೋವು ಮಾತ್ರವಲ್ಲ, ಅದರ ಲಕ್ಷಣಗಳನ್ನು ತಿಳಿಯಿರಿ

Image Credits: Adobe Stock