ಡಕೌಟ್​ನಲ್ಲಿ ರೋಹಿತ್​ ದಾಖಲೆ ಮುರಿದ ಗ್ಲೆನ್ ಮ್ಯಾಕ್ಸ್​ವೆಲ್

By Prasanna Kumar PN
Mar 25, 2025

Hindustan Times
Kannada

ಐಪಿಎಲ್ 18ನೇ ಆವೃತ್ತಿಯಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಬ್ಯಾಟರ್​ ಗ್ಲೆನ್ ಮ್ಯಾಕ್ಸ್​ವೆಲ್ ಕೆಟ್ಟ ದಾಖಲೆಯೊಂದನ್ನು ಬರೆದಿದ್ದಾರೆ. 

ಅಹ್ಮದಾಬಾದ್​​ನ ನರೇಂದ್ರ ಮೋದಿ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮ್ಯಾಕ್ಸ್​​ವೆಲ್​ ತಾನು ಎದುರಿಸಿದ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್ ಆಗುವುದರೊಂದಿಗೆ ಅನಗತ್ಯ ದಾಖಲೆ ನಿರ್ಮಿಸಿದ್ದಾರೆ.

ಸಾಯಿ ಕಿಶೋರ್ ಬೌಲಿಂಗ್​ನಲ್ಲಿ ಮೊದಲ ಎಸೆತದಲ್ಲೇ ಔಟಾದ ಆಸ್ಟ್ರೇಲಿಯಾ ಹಿಟ್ಟರ್​, ಐಪಿಎಲ್ ಇತಿಹಾಸದಲ್ಲಿ ಅತ್ಯಧಿಕ ಡಕೌಟ್ ಆದ ಆಟಗಾರ ಎಂಬ ಕೆಟ್ಟ ದಾಖಲೆ ನಿರ್ಮಿಸಿದ್ದಾರೆ.

ಇದರೊಂದಿಗೆ, ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಡಕೌಟ್‌ (0 ರನ್)‌ ಆದ ಆಟಗಾರರ ಪಟ್ಟಿಯಲ್ಲಿ ರೋಹಿತ್​ ಶರ್ಮಾ ದಾಖಲೆ ಮುರಿದು ಅಗ್ರಸ್ಥಾನಕ್ಕೇರಿದ್ದಾರೆ.

ಐಪಿಎಲ್​ ಇತಿಹಾಸದಲ್ಲಿ ಗ್ಲೆನ್ ಮ್ಯಾಕ್ಸ್​ವೆಲ್ 19 ಸಲ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ.

ರೋಹಿತ್‌ ಶರ್ಮಾ ಇದುವರೆಗೆ ಒಟ್ಟು 18 ಬಾರಿ ಡಕೌಟ್‌ ಆಗಿದ್ದು, ಎರಡನೇ ಸ್ಥಾನದಲ್ಲಿದ್ದಾರೆ.

ದಿನೇಶ್‌ ಕಾರ್ತಿಕ್‌ ಕೂಡ 18 ಬಾರಿಯೇ ಡಕೌಟ್​ ಆಗಿದ್ದು, ಜಂಟಿ 2ನೇ ಸ್ಥಾನ ಹೊಂದಿದ್ದಾರೆ.

ಪಿಯೂಷ್‌ ಚಾವ್ಲಾ ಹಾಗೂ ಸುನಿಲ್‌ ನರೈನ್‌ 16 ಬಾರಿ ಡಕೌಟ್ ಆಗಿದ್ದಾರೆ.

ತಂತ್ರಜ್ಞಾನ ಕ್ಷೇತ್ರದ ವಿಶ್ವದ ಪ್ರಭಾವಶಾಲಿ ಮಹಿಳೆಯರು

Photo Credit: X/@Jasmine Anteunis