ಟಿ20 ವಿಶ್ವಕಪ್​ ಗೆದ್ದಿರುವ ಏಳು ನಾಯಕರು ಇವರೇ ನೋಡಿ

By Prasanna Kumar P N
Apr 28, 2024

Hindustan Times
Kannada

2007ರಲ್ಲಿ ಟಿ20 ವಿಶ್ವಕಪ್ ಗೆದ್ದ ಭಾರತ ತಂಡದ ನಾಯಕ ಎಂಎಸ್ ಧೋನಿ. ಚೊಚ್ಚಲ ಟಿ20 ವಿಶ್ವಕಪ್​​ನಲ್ಲೇ ಟ್ರೋಫಿ ಎತ್ತಿ ಹಿಡಿದಿದ್ದರು. ಪಾಕಿಸ್ತಾನ ವಿರುದ್ಧ ಫೈನಲ್​​ನಲ್ಲಿ ಭಾರತ ಗೆದ್ದಿತ್ತು.

2009ರ ಟಿ20 ವಿಶ್ವಕಪ್‌ನ 2009ರ ಆವೃತ್ತಿಯನ್ನು ಯೂನಿಸ್ ಖಾನ್ ನಾಯಕತ್ವದಲ್ಲಿ ಪಾಕಿಸ್ತಾನವು ಶ್ರೀಲಂಕಾವನ್ನು ಫೈನಲ್‌ನಲ್ಲಿ ಸೋಲಿಸುವ ಮೂಲಕ ಟ್ರೋಫಿ ಗೆದ್ದುಕೊಂಡಿತು.

 2010ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಆಸ್ಟ್ರೇಲಿಯಾ ತಂಡವನ್ನು ಪಾಲ್ ಕಾಲಿಂಗ್‌ವುಡ್ ನೇತೃತ್ವದಲ್ಲಿ ಇಂಗ್ಲೆಂಡ್ ತಂಡ ಚೊಚ್ಚಲ ಟ್ರೋಫಿ ಜಯಿಸಿತ್ತು.

ಎರಡು ಬಾರಿ ಟಿ20 ವಿಶ್ವಕಪ್ ಗೆದ್ದ ಏಕೈಕ ನಾಯಕ ಡ್ಯಾರೆನ್ ಸಾಮಿ. ಅವರ ನಾಯಕತ್ವದಲ್ಲಿ ವೆಸ್ಟ್ ಇಂಡೀಸ್ 2012 ಮತ್ತು 2016ರಲ್ಲಿ ಪ್ರಶಸ್ತಿಗೆ ಮುತ್ತಿಕ್ಕಿತ್ತು.

ಲಸಿತ್ ಮಾಲಿಂಗ ನೇತೃತ್ವದ ಶ್ರೀಲಂಕಾ 2014ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿತು.

ಆರನ್ ಫಿಂಚ್ ಅವರು 2021ರ ಟಿ20 ವಿಶ್ವಕಪ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕರಾಗಿದ್ದರು.

2022ರ ಟಿ20 ವಿಶ್ವಕಪ್​​​ ಫೈನಲ್​ನಲ್ಲಿ ಪಾಕಿಸ್ತಾನ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ನಂತರ ಜೋಸ್ ಬಟ್ಲರ್ ನಾಯಕತ್ವದಲ್ಲಿ ಇಂಗ್ಲೆಂಡ್ ತನ್ನ 2ನೇ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.

ಇನ್​ಸ್ಟಾಗ್ರಾಂನಲ್ಲಿ ಹೆಚ್ಚು ಫಾಲೋವರ್ಸ್ ಹೊಂದಿರುವ 10 ಭಾರತದ ಕ್ರಿಕೆಟಿಗರು