IND vs BAN: ವಿಶೇಷ ದಾಖಲೆಗೆ ಹಾರ್ದಿಕ್ ಪಾಂಡ್ಯಗೆ ಬೇಕು 5 ವಿಕೆಟ್
By Jayaraj
Oct 05, 2024
Hindustan Times
Kannada
ಬಾಂಗ್ಲಾದೇಶ ವಿರುದ್ಧದ ಮೊದಲ ಟಿ20 ಪಂದ್ಯಕ್ಕೆ ಭಾರತ ಸಜ್ಜಾಗಿದೆ.
ಪಂದ್ಯದ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡಲು ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸಜ್ಜಾಗಿದ್ದಾರೆ.
ಸರಣಿಯಲ್ಲಿ ಹಾರ್ದಿಕ್ ಐತಿಹಾಸಿಕ ಮೈಲಿಗಲ್ಲು ತಲುಪುವ ಗುರಿ ಹಾಕಿಕೊಂಡಿದ್ದಾರೆ.
ಟಿ20 ಸ್ವರೂಪದಲ್ಲಿ ಈವರೆಗೆ 86 ವಿಕೆಟ್ ಕಬಳಿಸಿರುವ ಹಾರ್ದಿಕ್, ವೇಗಿಗಳ ಪೈಕಿ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಲು 5 ವಿಕೆಟ್‌ಗಳ ಅಗತ್ಯವಿದೆ.
ಸದ್ಯ ಈ ದಾಖಲೆಯು ಭುವನೇಶ್ವರ್ ಕುಮಾರ್ ಹೆಸರಿನಲ್ಲಿದೆ. ಅವರು ಒಟ್ಟು 90 ವಿಕೆಟ್ ಕಬಳಿಸಿದ್ದಾರೆ.
ಜಸ್ಪ್ರೀತ್ ಬುಮ್ರಾ 89 ವಿಕೆಟ್‌ಗಳೊಂದಿಗೆ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಆದರೆ ಅವರು ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿಯಲ್ಲಿ ಆಡುತ್ತಿಲ್ಲ.
ಒಟ್ಟಾರೆ ಅಂಕಿಅಂಶಗಳನ್ನು ನೋಡುವುದಾದರೆ, ಸ್ಪಿನ್ನರ್ ಯುಜ್ವೇಂದ್ರ ಚಹಾಲ್ 96 ವಿಕೆಟ್ ಪಡೆಯುವ ಮೂಲಕ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯನಾಗಿದ್ದಾರೆ.
3 ಪಂದ್ಯಗಳ ಸರಣಿಯ ಮೊದಲ ಪಂದ್ಯ ಭಾನುವಾರ ಗ್ವಾಲಿಯರ್‌ನಲ್ಲಿ ನಡೆಯುತ್ತಿದೆ.
ಬೆಂಗಳೂರು ಏರ್ ಶೋ ಬಗ್ಗೆ ನಿಮಗೆಷ್ಟು ಗೊತ್ತಿದೆ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ