ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

By Jayaraj
Feb 27, 2024

Hindustan Times
Kannada

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್‌ನಲ್ಲಿ ಐದು ವಿಕೆಟ್‌ ಪಡೆದು ರೆಕಾರ್ಡ್‌ ಮಾಡಿದ್ದಾರೆ.

ಡಬ್ಲ್ಯೂಟಿಸಿ ಇತಿಹಾಸದಲ್ಲಿ 100ಕ್ಕಿಂತ ಹೆಚ್ಚು ವಿಕೆಟ್‌ ಪಡೆದ ಭಾರತದ ಮೂರನೇ ಬೌಲರ್ ಎನಿಸಿಕೊಂಡಿದ್ದಾರೆ.

ಈ ಹಿಂದೆ ಆರ್ ಅಶ್ವಿನ್ ಮತ್ತು ಜಸ್ಪ್ರೀತ್ ಬುಮ್ರಾ ಮಾತ್ರ ಭಾರತದಿಂದ ಈ ಸಾಧನೆ ಮಾಡಿದ್ದಾರೆ.

ರಾಂಚಿ ಟೆಸ್ಟ್‌ನಲ್ಲಿ ಜಾನಿ ಬೇರ್‌ಸ್ಟೋವ್ ವಿಕೆಟ್‌ ಪಡೆಯುವ ಮೂಲಕ ವಿಶ್ವದ ನಂ.1 ಟೆಸ್ಟ್ ಆಲ್‌ರೌಂಡರ್ ಈ ಮೈಲಿಗಲ್ಲು ಸಾಧಿಸಿದರು.

ಎಡಗೈ ಸ್ಪಿನ್ನರ್ ರಾಂಚಿ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ನಾಲ್ಕು ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಒಂದು ವಿಕೆಟ್ ಪಡೆದರು.

ಈವರೆಗೆ ಡಬ್ಲ್ಯೂಟಿಸಿ ಇತಿಹಾಸದಲ್ಲಿ ಒಟ್ಟು 10 ಬೌಲರ್‌ಗಳು 100ಕ್ಕಿಂತ ಹೆಚ್ಚು ವಿಕೆಟ್‌ ಪಡೆದಿದ್ದಾರೆ. 

ಅಶ್ವಿನ್ 165 ವಿಕೆಟ್‌ಗಳೊಂದಿಗೆ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಬುಮ್ರಾ 108 ವಿಕೆಟ್‌ ಪಡೆದು 9ನೇ ಸ್ಥಾನದಲ್ಲಿದ್ದಾರೆ.

41 ಟೆಸ್ಟ್‌ಗಳಲ್ಲಿ 174 ವಿಕೆಟ್‌ ಪಡೆದಿರುವ ಆಸ್ಟ್ರೇಲಿಯಾದ ನಾಥನ್ ಲಿಯಾನ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

ಗುಜರಾತ್ ಟೈಟಾನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ಮುಖಾಮುಖಿ ದಾಖಲೆ