ಬಾಯ್ಫ್ರೆಂಡ್ ಬರ್ತ್ಡೇಗೆ ಮುದ್ದಾಗಿ ಶುಭಕೋರಿದ ಸ್ಮೃತಿ ಮಂಧಾನ
By Prasanna Kumar P N
May 23, 2024
Hindustan Times
Kannada
ಟೀಮ್ ಇಂಡಿಯಾ ಮಹಿಳಾ ತಂಡದ ಆಟಗಾರ್ತಿ ಸ್ಮೃತಿ ಮಂಧಾನ ತಮ್ಮ ಬಾಯ್ಫ್ರೆಂಡ್ ಬರ್ತ್ಡೇಗೆ ಮುದ್ದಾಗಿ ಶುಭ ಕೋರಿದ್ದಾರೆ.
ಸ್ಮೃತಿ ಮಂಧಾನ ಅವರ ಬಾಯ್ಫ್ರೆಂಡ್ ಹೆಸರು ಪಾಲಾಶ್ ಮುಚ್ಚಲ್. ಬಾಲಿವುಡ್ ಸಂಗೀತ ನಿರ್ದೇಶಕ ಹಾಗೂ ಸಿನಿಮಾ ನಿರ್ದೇಶಕ ಮೇ 22ರಂದು 29 ವರ್ಷಕ್ಕೆ ಕಾಲಿಟ್ಟಿದ್ದಾರೆ.
ಈ ಹಿನ್ನೆಲೆ ಸ್ಮೃತಿ ಆತನನ್ನು ಹಗ್ ಮಾಡಿಕೊಂಡಿರುವ ಫೋಟೋ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದು, ಜನ್ಮದಿನಕ್ಕೆ ಶುಭ ಕೋರಿದ್ದಾರೆ.
ಜನ್ಮದಿನದ ಶುಭಾಶಯಗಳು Boiii. ನಿಮ್ಮ ಮುಂದಿನ ದಿನಗಳು ಅದ್ಭುತವಾಗಿರಲಿ ಎಂದು ಹಾರೈಸುತ್ತೇನೆ. ಯಾವಾಗಲೂ ನನ್ನೊಂದಿರುವುದಕ್ಕೆ ಧನ್ಯವಾದಗಳು ಎಂದು ಪೋಸ್ಟ್ ಹಾಕಿದ್ದಾರೆ.
ಸ್ಮೃತಿ ಮತ್ತು ಪಾಲಾಶ್ ಇಬ್ಬರು ಹಲವು ವರ್ಷಗಳಿಂದ ಡೇಟಿಂಗ್ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಸಹ ಬೆಸ್ಟ್ ಫ್ರೆಂಡ್ಸ್ ಎಂದು ಕೆಲವು ವರದಿಗಳು ಹೇಳುತ್ತಿವೆ.
ಸ್ಮೃತಿ ಮೇ 18ರಂದು ನಡೆದ ಸಿಎಸ್ಕೆ vs ಆರ್ಸಿಬಿ ಪಂದ್ಯವನ್ನು ಕಣ್ತುಂಬಿಕೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಮೈದಾನಕ್ಕೆ ಬಂದಿದ್ದರು.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆದ ದಿನಾಂಕ ಯಾವುದು?
ಮುಂದಿನ ಸ್ಟೋರಿ ಕ್ಲಿಕ್ ಮಾಡಿ