ಐಪಿಎಲ್‌ ಆರಂಭಿಕ ಪಂದ್ಯಗಳಿಗೆ ಸೂರ್ಯಕುಮಾರ್‌ ಯಾದವ್‌ ಡೌಟ್

By Jayaraj
Mar 12, 2024

Hindustan Times
Kannada

ಸೂರ್ಯಕುಮಾರ್ ಯಾದವ್ ಈ ಬಾರಿಯ ಐಪಿಎಲ್‌ ಆಡೋದು ಅನುಮಾನ

ಸದ್ಯ ವಿಶ್ವದ ನಂಬರ್‌ ವನ್‌ ಆಟಗಾರ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದಾರೆ.

ಹೀಗಾಗಿ ಮುಂಬೈ ಇಂಡಿಯನ್ಸ್‌ ತಂಡದ ಮೊದಲ ಎರಡು ಪಂದ್ಯಗಳಲ್ಲಿ ಸೂರ್ಯ ಆಡುವುದು ಅನುಮಾನವಾಗಿದೆ.

ಕಳೆದ ವರ್ಷದ ಡಿಸೆಂಬರ್‌ ತಿಂಗಳಿಂದ ಸೂರ್ಯಕುಮಾರ್‌ ಮೈದಾನಕ್ಕಿಳಿದಿಲ್ಲ.

ಪ್ರಸ್ತುತ ಅವರು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿಗೆ ಒಳಗಾಗಿದ್ದಾರೆ.

ಜನವರಿ ತಿಂಗಳಲ್ಲಿ ಜರ್ಮನಿಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಬಿಸಿಸಿಐ ಮೂಲಗಳ ಪ್ರಕಾರ, ಎನ್‌ಸಿಎ ವೈದ್ಯಕೀಯ ತಂಡವು ಸೂರ್ಯ ಅವರಿಗೆ ಅನುಮತಿ ನೀಡುವ ಸಾಧ್ಯತೆ ಕಡಿಮೆ ಇದೆ.

ಹೀಗಾಗಿ ಐಪಿಎಲ್‌ನ ಮೊದಲ ಎರಡು ಪಂದ್ಯಗಳಲ್ಲಿ ಪಾಲ್ಗೊಳ್ಳಲು ಸೂರ್ಯಗೆ ಅವಕಾಶ ಸಿಗುವುದು ಕಷ್ಟ

ಗುಜರಾತ್ ಟೈಟಾನ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯಗಳಲ್ಲಿ ಸೂರ್ಯ ಕಣಕ್ಕಿಳಿಯುವ ಸಾಧ್ಯತೆ ಇಲ್ಲ.

ಬಿಸಿಲು ಹೆಚ್ಚಾಯ್ತು ಅಂತ ಐಸ್‌ಕ್ರೀಂ ತಿನ್ನುವ ಮೊದಲು ಈ ವಿಷಯ ತಿಳ್ಕೊಳಿ