ರೈಲ್ವೇಯಲ್ಲಿ ಕೆಲಸ ಮಾಡುತ್ತಿದ್ದರು ಧೋನಿ

By Jayaraj
Jun 15, 2024

Hindustan Times
Kannada

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂಎಸ್‌ ಧೋನಿ ವಿಶ್ವದ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು.

ಎಲ್ಲಾ ಮೂರು ಪ್ರಮುಖ ಐಸಿಸಿ ಟ್ರೋಫಿಗಳನ್ನು ಗೆದ್ದ ಭಾರತದ ಏಕೈಕ ನಾಯಕ ಎಂಬ ಹೆಗ್ಗಳಿಕೆ ಧೋನಿಯದ್ದು.

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮೊದಲು ಧೋನಿ ಭಾರತೀಯ ರೈಲ್ವೇಯಲ್ಲಿ ಕೆಲಸ ಮಾಡುತ್ತಿದ್ದರು ಎಂಬುದು ಹೆಚ್ಚಿನವರಿಗೆ ತಿಳಿದಿಲ್ಲ.

ಧೋನಿಗೆ ರೈಲ್ವೇಯಲ್ಲಿ ಟಿಕೆಟ್ ಕಲೆಕ್ಟರ್ ಕೆಲಸ ಸಿಕ್ಕಿತ್ತು. ಅವರನ್ನು ಖರಗ್‌ಪುರ ರೈಲು ನಿಲ್ದಾಣದಲ್ಲಿ ನಿಯೋಜಿಸಲಾಗಿತ್ತು.

ಧೋನಿ 2001ರಿಂದ 2003ರವರೆಗೆ ಈ ಕೆಲಸ ಮಾಡಿದ್ದರು. ನಂತರ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದರು.

ಕುಟುಂಬಕ್ಕೆ ಆರ್ಥಿಕವಾಗಿ ನೆರವಾಗುವ ಉದ್ದೇಶದಿಂದ ಧೋನಿ ಸುಮಾರು 3 ವರ್ಷಗಳ ಕಾಲ ರೈಲ್ವೇಯಲ್ಲಿ ಕೆಲಸ ಮಾಡಿದ್ದರು.

ಜಾರ್ಖಂಡ್‌ನ ರಾಜಧಾನಿ ರಾಂಚಿಯಲ್ಲಿ ಜನಿಸಿದ ಧೋನಿ ಮಧ್ಯಮ ವರ್ಗದ ಕುಟುಂಬದವರು.

ಕೆಲಸದ ನಡುವೆಯೂ ಧೋನಿ ಕ್ರಿಕೆಟ್ ಆಡುತ್ತಿದ್ದರು. ತರಬೇತಿಗಾಗಿ ಸಮಯ ತೆಗೆದುಕೊಳ್ಳುತ್ತಿದ್ದರು.

ಎಚ್ಚರ! 

ನಿಮ್ಮ ನಾಯಿಗೆ ಈ ಆಹಾರಗಳನ್ನು ಯಾವತ್ತೂ ಕೊಡಲೇಬೇಡಿ

PEXELS