ಬ್ರೆಜಿಲ್ ಫುಟ್ಬಾಲ್ ತಾರೆ ನೇಯ್ಮರ್ ಹಿಂದಿಕ್ಕಿದ ವಿರಾಟ್ ಕೊಹ್ಲಿ

By Prasanna Kumar P N
Jun 06, 2024

Hindustan Times
Kannada

ಟೀಮ್ ಇಂಡಿಯಾ ಬ್ಯಾಟಿಂಗ್ ಸೂಪರ್ ಸ್ಟಾರ್​ ವಿರಾಟ್ ಕೊಹ್ಲಿ ಸಾಮಾಜಿಕ ಜಾಲತಾಣಗಳ ಫಾಲೋವರ್​​ಗಳ ವಿಚಾರದಲ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ.

ಎಕ್ಸ್ ಖಾತೆಯಲ್ಲಿ (ಟ್ವಿಟರ್​) ಅತ್ಯಧಿಕ ಫಾಲೋವರ್​​ಗಳನ್ನು ಹೊಂದಿರುವ ವಿಶ್ವದ ಎರಡನೇ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದರೊಂದಿಗೆ ಬ್ರೆಜಿಲ್ ಫುಟ್ಬಾಲ್ ತಾರೆ ನೇಯ್ಮರ್ ಅವರನ್ನು ಎಕ್ಸ್​​​ನಲ್ಲಿ ಹಿಂದಿಕ್ಕಿ ಮೂರರಿಂದ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ.

ನೇಯ್ಮರ್​ 63.4 ಮಿಲಿಯನ್ ಫಾಲೋವರ್ಸ್ ಹೊಂದಿದ್ದರೆ, ಕೊಹ್ಲಿ ಇದೀಗ 63.5 ಮಿಲಿಯನ್ ಫಾಲೋವರ್​​ಗಳೊಂದಿಗೆ 2ನೇ ಸ್ಥಾನಕ್ಕೆ ತಲುಪಿದ್ದಾರೆ.

ಅಗ್ರಸ್ಥಾನದಲ್ಲಿ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೊ ರೊನಾಲ್ಡೊ ಸ್ಥಾನ ಪಡೆದಿದ್ದು, 111 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದಾರೆ.

ವಿರಾಟ್ ಇನ್​ಸ್ಟಾಗ್ರಾಂನಲ್ಲಿ 269 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ.

ಕಡ್ಲೆಬೀಜ ಶಕ್ತಿ ತಿಳಿದರೆ ಬಾದಾಮಿ ಪಕ್ಕಕ್ಕೆ ಇಡ್ತೀರಿ