ಕ್ಯಾಲೆಂಡರ್ ವರ್ಷದಲ್ಲಿ ಹೆಚ್ಚು ರನ್; ಯಶಸ್ವಿ ಜೈಸ್ವಾಲ್ ದಾಖಲೆ
By Jayaraj
Dec 30, 2024
Hindustan Times
Kannada
ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ ಯಶಸ್ವಿ ಜೈಸ್ವಾಲ್ ಅರ್ಧಶತಕಗಳನ್ನು ಬಾರಿಸಿದರು.
ಮೊದಲ ಇನ್ನಿಂಗ್ಸ್‌ನಲ್ಲಿ 82 ಹಾಗೂ ಎರಡನೇ ಇನ್ನಿಂಗ್ಸ್‌ನಲ್ಲಿ 84 ರನ್ ಬಾರಿಸಿದ್ದಾರೆ.
ಪ್ರಸಕ್ತ ಕ್ಯಾಲೆಂಡರ್ ವರ್ಷ ಟೆಸ್ಟ್ ಕ್ರಿಕೆಟ್‌ನಲ್ಲಿ ಪ್ರಚಂಡ ಫಾರ್ಮ್‌ನಲ್ಲಿರುವ ಆಟಗಾರ, ಅತಿ ಹೆಚ್ಚು ರನ್ ಪೇರಿಸಿದವರ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ಈ ವರ್ಷ ಒಟ್ಟಾರೆ 54.74ರ ಸರಾಸರಿಯಲ್ಲಿ 1478 ರನ್ ಬಾರಿಸಿದ್ದಾರೆ. ಇದರಲ್ಲಿ 3 ಶತಕ ಹಾಗೂ 9 ಅರ್ಧಶತಕ ಸೇರಿದೆ.
ಇಂಗ್ಲೆಂಡ್ ತಂಡದ ಜೋ ರೂಟ್ ಈ ವರ್ಷ(2024) 1556 ರನ್ ಗಳಿಸಿ ಅಗ್ರ ಸ್ಥಾನದಲ್ಲಿದ್ದಾರೆ. ಹೀಗಾಗಿ ಜೈಸ್ವಾಲ್ ಎರಡನೇ ಸ್ಥಾನದಲ್ಲಿದ್ದಾರೆ.
2010ರಲ್ಲಿ ಸಚಿನ್ ತೆಂಡೂಲ್ಕರ್ 1562 ರನ್ ಗಳಿಸಿದ್ದರು.
ಒಂದೇ ಕ್ಯಾಲೆಂಡರ್ ವರ್ಷದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯರ ಪೈಕಿ ಸಚಿನ್ ಅಗ್ರಸ್ಥಾನದಲ್ಲಿದ್ದಾರೆ.
ಇದೀಗ ಈ ವರ್ಷ 1478 ರನ್ ಬಾರಿಸಿರುವ ಜೈಸ್ವಾಲ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಸುನಿಲ್ ಗವಾಸ್ಕರ್ ಎರಡನೇ ಸ್ಥಾನದಲ್ಲಿದ್ದಾರೆ.
Photos: AP/PTI
26 ಎಸೆತಗಳಲ್ಲಿ ಪಂದ್ಯ ಗೆದ್ದ ಭಾರತ ತಂಡ
Photos: ICC/BCCI
ಮುಂದಿನ ಸ್ಟೋರಿ ಕ್ಲಿಕ್ ಮಾಡಿ