ತಮಿಳುನಾಡು ಶೈಲಿಯ ಕೊತ್ತಂಬರಿ ಸೊಪ್ಪಿನ ಚಟ್ನಿ ಬಹಳ ರುಚಿಕರವಾದ ಖಾದ್ಯವಾಗಿದ್ದು, ಪಾಕವಿಧನ ಕೂಡ ತುಂಬಾ ಸರಳ. ಇಡ್ಲಿ, ದೋಸೆ, ಪರೋಟ, ಅನ್ನದ ಜೊತೆ ತಿನ್ನಲು ರುಚಿಯಾಗಿರುತ್ತದೆ.
ಕೊತ್ತಂಬರಿ ಸೊಪ್ಪಿನ ಚಟ್ನಿ ತಯಾರಿಸುವುದು ತುಂಬಾ ಸುಲಭ. ಇಲ್ಲಿದೆ ಪಾಕವಿಧಾನ.
ಮೊದಲಿಗೆ ಬಾಣಲೆಯನ್ನು ಒಲೆ ಮೇಲಿಟ್ಟು 1 ಚಮಚ ಎಣ್ಣೆ ಹಾಕಿ ಉದ್ದಿನ ಬೇಳೆ ಹಾಕಿ ಹುರಿಯಿರಿ.
ಉದ್ದಿನ ಬೇಳೆ ಕಂದು ಬಣ್ಣಕ್ಕೆ ತಿರುಗಿದ ನಂತರ ಬೆಳ್ಳುಳ್ಳಿ ಎಸಳು, ಈರುಳ್ಳಿ ಮತ್ತು ಒಣಮೆಣಸಿನಕಾಯಿ ಸೇರಿಸಿ.
ಉಪ್ಪು ಮತ್ತು ಕೊತ್ತಂಬರಿ ಸೊಪ್ಪು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ. ನಂತರ ತೆಂಗಿನ ತುರಿ ಬೆರೆಸಿ.ಈ ಎಲ್ಲಾ ಪದಾರ್ಥಗಳನ್ನು ತಣ್ಣಗಾಗಲು ಬಿಡಿ. ನಂತರ ಮಿಕ್ಸಿ ಜಾರ್‌ಗೆ ಹಾಕಿ ನಯವಾಗಿ ರುಬ್ಬಿಕೊಳ್ಳಿ.
ರುಬ್ಬಿರುವ ಮಿಶ್ರಣವನ್ನು ಒಂದು ಬೌಲ್‌ಗೆ ಹಾಕಿ. ಈಗ ಬಾಣಲೆಯಲ್ಲಿ ಎಣ್ಣೆ ಬಿಸಿ ಮಾಡಿ ಸಾಸಿವೆ, ಕರಿಬೇವಿನ ಸೊಪ್ಪು ಹಾಕಿ.