ಕರಿಬೇವಿನ ಎಲೆಯನ್ನು ಪ್ರಾಚೀನ ಕಾಲದಿಂದಲೂ ಕೂದಲಿನ ಆರೋಗ್ಯಕ್ಕಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಯ ಎಣ್ಣೆಯನ್ನು ತಯಾರಿಸುವುದರಿಂದ ಕೂದಲು ಉದ್ದವಾಗಿ ಬೆಳೆಯುತ್ತದೆ.
ಕರಿಬೇವಿನ ಎಲೆಯಲ್ಲಿ ವಿಟಮಿನ್ ಸಿ, ಬಿ, ಪ್ರೋಟೀನ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ, ನೆತ್ತಿಯ ಆರೋಗ್ಯವನ್ನು ಸುಧಾರಿಸುತ್ತದೆ.
ಕರಿಬೇವಿನ ಎಲೆ ವಿಶೇಷವಾಗಿ ತಲೆಹೊಟ್ಟಿಗೆ ಉತ್ತಮ ಪರಿಹಾರವಾಗಿದೆ. ಇದು ಉರಿಯೂತ ನಿವಾರಕ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಲಕ್ಷಣಗಳನ್ನು ಹೊಂದಿದ್ದು, ತಲೆಹೊಟ್ಟನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ತಲೆಹೊಟ್ಟನ್ನು ಕಡಿಮೆ ಮಾಡಲು ಕರಿಬೇವಿನ ಎಲೆಯ ಪೇಸ್ಟ್ ಮೊಸರಿನೊಂದಿಗೆ ತಯಾರಿಸಿ ತಲೆಗೆ ಉಜ್ಜಿಕೊಳ್ಳಬಹುದು.
15 ರಿಂದ 20 ಕರಿಬೇವಿನ ಎಲೆಯನ್ನು ಚೆನ್ನಾಗಿ ತೊಳೆದು ನಂತರ ರುಬ್ಬಿಕೊಳ್ಳಿ. ಅದಕ್ಕೆ ಮೊಸರು ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ ತಲೆಗೆ ಹಚ್ಚಿ. ಕನಿಷ್ಠ ಒಂದು ಗಂಟೆ ಕಾಲ ಹಾಗೆ ಬಿಡಿ. ನಂತರ ಉಗುರು ಬೆಚ್ಚಗಿನ ನೀರಿನಿಂದ ತೊಳೆಯಿರಿ.
ಈ ರೀತಿ ಮಾಡುವುದರಿಂದ ತಲೆಹೊಟ್ಟನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ. ಇದನ್ನು ವಾರಕ್ಕೆ ಎರಡು ಅಥವಾ ಮೂರು ಬಾರಿ ಮಾಡಬಹುದು.
Image Credit: Pexels
ಕರಿಬೇವಿನ ಎಲೆ ಮತ್ತು ಜೇನುತುಪ್ಪವು ತಲೆಹೊಟ್ಟನ್ನು ತೊಡೆದುಹಾಕಲು ಅತ್ಯುತ್ತಮ ಔಷಧಿ. ಇದಕ್ಕಾಗಿ, ಕರಿಬೇವಿನ ಎಲೆಗಳನ್ನು ಅರೆದು ಪೇಸ್ಟ್ ಮಾಡಿ. ಅದಕ್ಕೆ ಜೇನುತುಪ್ಪ ಮಿಶ್ರಣ ಮಾಡಿ ಕೂದಲಿಗೆ ಹಚ್ಚಿಕೊಳ್ಳಬೇಕು.
ಬಾಣಲೆಯಲ್ಲಿ ಸ್ವಲ್ಪ ತೆಂಗಿನ ಎಣ್ಣೆಯನ್ನು ತೆಗೆದುಕೊಂಡು ಅದರಲ್ಲಿ ಹತ್ತರಿಂದ ಇಪ್ಪತ್ತು ಕರಿಬೇವಿನ ಎಲೆ ಹಾಕಿ, ಚೆನ್ನಾಗಿ ಬಿಸಿ ಮಾಡಿ. ಎಣ್ಣೆ ತಣ್ಣಗಾದ ನಂತರ, ಅದನ್ನು ತಲೆಗೆ ಹಚ್ಚಿ ಮಸಾಜ್ ಮಾಡಿ. ಒಂದು ಗಂಟೆ ನಂತರ ಸ್ನಾನ ಮಾಡಿ. ಇದನ್ನು ವಾರಕ್ಕೆ ಮೂರು ಅಥವಾ ನಾಲ್ಕು ಬಾರಿ ಬಳಸಬಹುದು.
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.
Horoscope: ಮಕ್ಕಳು ಪ್ರಗತಿ ಹೊಂದುತ್ತಾರೆ; ಏಪ್ರಿಲ್ 20ರ ಭಾನುವಾರ ದಿನ ಭವಿಷ್ಯ