ದೊಡ್ಡಪತ್ರೆಯು ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿ ಇದನ್ನು ಬಹಳ ಉಪಯುಕ್ತವೆಂದು ಪರಿಗಣಿಸಲಾಗಿದೆ. ಇದರ ಪ್ರಯೋಜನ ಹಲವು.
Pinterest
ದೊಡ್ಡಪತ್ರೆಯನ್ನು ಸೇವಿಸುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಜೀರ್ಣಕ್ರಿಯೆ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಇದು ಪ್ರಯೋಜನಕಾರಿ.
Pinterest
ಇದರ ಎಲೆಯ ಕಷಾಯ ಕುಡಿಯುವುದರಿಂದ ಶೀತ ಮತ್ತು ಕೆಮ್ಮಿಗೆ ರಾಮಬಾಣವಾಗಿದೆ. ಮಕ್ಕಳಿಗೆ ನೆಗಡಿ, ಕೆಮ್ಮು ಇದ್ದರೆ ಇದರ ಎಲೆಯ ರಸವನ್ನು ಕುಡಿಸುತ್ತಾರೆ.
Pinterest
ದೊಡ್ಡಪತ್ರೆಯ ನಿಯತ ಸೇವನೆಯು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸುವ ಮೂಲಕ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.
Pinterest
ಇದರಲ್ಲಿರುವ ನಾರಿನಂಶ ಹಾಗೂ ಇತರೆ ಅಂಶಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
Pinterest
ದೊಡ್ಡಪತ್ರೆಯ ಸೇವನೆಯು ಮಹಿಳೆಯರಿಗೆ ಸಾಮಾನ್ಯವಾಗಿ ಕಾಡುವ ಮುಟ್ಟಿನ ನೋವು, ಸೆಳೆತವನ್ನು ಕಡಿಮೆ ಮಾಡಲು ಸಹಾಯಕವಾಗಿದೆ.
Pinterest
ರೋಗನಿರೋಧಕ ಶಕ್ತಿ ಹೆಚ್ಚಲು ಸಹಕಾರಿ ಹಾಗೂ ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಉಪಯುಕ್ತವಾಗಿದೆ.
Pinterest
ಚರ್ಮದ ಸೋಂಕುಗಳು ಹಾಗೂ ಕಲೆಗಳನ್ನು ಹೋಗಲಾಡಿಸಲು ಕೂಡ ಇದು ಸಹಕಾರಿ.
Pinterest
ದೊಡ್ಡಪತ್ರೆಯನ್ನು ಜಗಿಯುವುದರಿಂದ ಬಾಯಿಯ ದುರ್ವಾಸನೆ ಮತ್ತು ಹಲ್ಲುನೋವು ನಿವಾರಣೆಯಾಗುತ್ತದೆ.
Pinterest
ದೊಡ್ಡಪತ್ರೆಯ ಎಲೆಯನ್ನು ಜಜ್ಜಿ ಇದರ ರಸ ಹಿಂಡಿ ಕುಡಿಯುವುದರಿಂದ ಹೊಟ್ಟೆನೋವು ನಿವಾರಣೆಯಾಗುತ್ತದೆ.
Pinterest
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.
Pinterest
ಅರಿಶಿನದಲ್ಲಿ ಮಿಂದೆದ್ದ ನಟ ಧನಂಜಯ್ ಮತ್ತು ಧನ್ಯತಾ; ಹಳದಿ ಶಾಸ್ತ್ರ ಫೋಟೋಸ್