ಹಾಲಿನಲ್ಲಿ ನೆನೆಸಿದ ಮಖಾನಾ ತಿನ್ನುವುದರ ಆರೋಗ್ಯ ಪ್ರಯೋಜನಗಳು

By Priyanka Gowda
Mar 27, 2025

Hindustan Times
Kannada

ಮಖಾನಾ ಮತ್ತು ಹಾಲು ಎರಡೂ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ. ಒಟ್ಟಿಗೆ ಬೆರೆಸಿ ಸೇವಿಸುವುದರಿಂದ ಅದರ ಪ್ರಯೋಜನ ಮತ್ತಷ್ಟು ಹೆಚ್ಚಾಗುತ್ತದೆ. ಇದರ 8 ಆರೋಗ್ಯ ಪ್ರಯೋಜನಗಳ ಬಗ್ಗೆ ಇಲ್ಲಿದೆ ಮಾಹಿತಿ.

Image Credits: Adobe Stock

ಇದು ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುತ್ತದೆ ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. 

Image Credits : Adobe Stock

ಮಖಾನಾದಲ್ಲಿ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಕಡಿಮೆ ಇದೆ. ಆದರೆ ಹಾಲು ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ. ಈ ಪೋಷಕಾಂಶಗಳು ರಕ್ತದೊತ್ತಡವನ್ನು ನಿಯಂತ್ರಿಸಲು ಮತ್ತು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Image Credits : Adobe Stock

ಮಖಾನಾದಲ್ಲಿರುವ ಫೈಬರ್ ಪ್ರಮಾಣವು ಆರೋಗ್ಯಕರ ಜೀರ್ಣಕ್ರಿಯೆ ಮತ್ತು ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ. ಹಾಲು ಜೀರ್ಣಾಂಗ ವ್ಯವಸ್ಥೆಯನ್ನು ಶಮನಗೊಳಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಗಟ್ಟುವಲ್ಲಿ ಪರಿಣಾಮಕಾರಿಯಾಗಿದೆ. 

Image Credits : Adobe Stock

ಮಖಾನಾದಲ್ಲಿ ನಾರಿನಂಶ ಸಮೃದ್ಧವಾಗಿದೆ. ಇದರಿಂದ ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಹಾಲಿನಲ್ಲಿರುವ ಪ್ರೋಟೀನ್ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. 

Image Credits : Adobe Stock

ಹಾಲು ಮತ್ತು ಮಖಾನಾ ಸೇವನೆಯು ಮೂಳೆಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಮಖಾನಾದಲ್ಲಿ ಕ್ಯಾಲ್ಸಿಯಂ ಮತ್ತು ರಂಜಕವಿದೆ. ಇದು ಮೂಳೆಗಳನ್ನು ಬಲಪಡಿಸಲು ಅವಶ್ಯಕವಾಗಿದೆ. 

Image Credits : Adobe Stock

ಮಖಾನಾದಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಇನ್ಸುಲಿನ್ ಹೆಚ್ಚಳವನ್ನು ತಡೆಯಲು ಸಹಾಯ ಮಾಡುತ್ತದೆ. ಹಾಲನ್ನು ಮಿತವಾಗಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

Image Credits : Adobe Stock

ಮಖಾನಾದಲ್ಲಿ ಟ್ರಿಪ್ಟೋಫಾನ್ ಎಂಬ ಅಮೈನೋ ಆಮ್ಲವಿದೆ. ಇದು ವಿಶ್ರಾಂತಿಯನ್ನು ಉತ್ತೇಜಿಸುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ. ಹಾಲು ಮೆಲಟೋನಿನ್ ಎಂಬ ಹಾರ್ಮೋನಿನ ನೈಸರ್ಗಿಕ ಮೂಲವಾಗಿದೆ. ಇದು ನಿದ್ರೆ ಚಕ್ರಗಳನ್ನು ನಿಯಂತ್ರಿಸುತ್ತದೆ. 

Image Credits : Adobe Stock

ಮಖಾನಾದಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಫ್ರೀ ರಾಡಿಕಲ್‍ಗಳಿಂದ ಉಂಟಾಗುವ ಹಾನಿಯಿಂದ ಚರ್ಮವನ್ನು ರಕ್ಷಿಸಲು ಸಹಾಯ ಮಾಡುತ್ತದೆ. ಹಾಲು ಅನೇಕ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳನ್ನು ಒದಗಿಸುತ್ತದೆ, ಇದು ಚರ್ಮದ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.

Image Credits : Adobe Stock

ಸಚಿನ್‌ ತೆಂಡೂಲ್ಕರ್‌ ದಾಖಲೆ ಮುರಿದ ರಜತ್‌ ಪಾಟೀದಾರ್‌