ಪ್ರತಿದಿನ ಕಿವಿ ಹಣ್ಣು ತಿನ್ನುವುದರಿಂದ ಆರೋಗ್ಯಕ್ಕಿವೆ ಇಷ್ಟೆಲ್ಲಾ ಪ್ರಯೋಜನ

pixa bay

By Priyanka Gowda
Nov 21, 2024

Hindustan Times
Kannada

ಪ್ರತಿದಿನ ಕಿವಿ ಹಣ್ಣು ತಿನ್ನುವುದರಿಂದ ಹಲವು ಲಾಭಗಳಿವೆ. ಕಿವಿ ಹಣ್ಣು ಪೊಟ್ಯಾಸಿಯಂನಲ್ಲಿ ಸಮೃದ್ಧವಾಗಿದ್ದು, ಆರೋಗ್ಯಕ್ಕೆ ಬಹಳ ಪ್ರಯೋಜನಕಾರಿ.

pixa bay

ಇದು ಮೂತ್ರಪಿಂಡದ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ನೀರಿನಂಶ ಹೆಚ್ಚಿರುವುದರಿಂದ ದೇಹವನ್ನು ಹೈಡ್ರೀಕರಿಸಲು ಹಾಗೂ ಚರ್ಮದ ಆರೋಗ್ಯಕ್ಕೆ ಸಹಾಯಕವಾಗಿದೆ.

pixa bay

ಕಿವಿಯಲ್ಲಿ ನಾರಿನಂಶ ಉತ್ತಮವಾಗಿದ್ದು, ಪ್ರತಿದಿನ ಕಿವುಚಿ ತಿನ್ನುವುದರಿಂದ ನಮ್ಮ ದೇಹದಲ್ಲಿ ಜೀರ್ಣಶಕ್ತಿ ಹೆಚ್ಚುತ್ತದೆ. ಹೊಟ್ಟೆ ಉಬ್ಬರ ಅಥವಾ ಮಲಬದ್ಧತೆಯಂತಹ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ.

pixa bay

ಕಿವಿಯಲ್ಲಿ ವಿಟಮಿನ್ ಕೆ, ಅಧಿಕವಾಗಿರುತ್ತದೆ. ಇದು ರಕ್ತ ಹೆಪ್ಪುಗಟ್ಟುವಿಕೆಯನ್ನು ತಡೆಯಲು ಸಹಾಯ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

pixa bay

ಕಿವಿಯಲ್ಲಿ ವಿಟಮಿನ್ ಇ ಮತ್ತು ಪಾಲಿಫಿನಾಲ್‌ಗಳಂತಹ ಆಂಟಿಆಕ್ಸಿಡೆಂಟ್‌ಗಳಿವೆ. ಹೃದ್ರೋಗ ಮತ್ತು ಕ್ಯಾನ್ಸರ್‌ನಂತಹ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. 

pixa bay

ಕಡಿಮೆ ಕ್ಯಾಲೋರಿಗಳಿದ್ದು, ಫೈಬರ್ ಅಂಶ ಅಧಿಕವಾಗಿದೆ. ಇದು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಒಟ್ಟಾರೆ ತೂಕ ನಿರ್ವಹಣೆಯನ್ನು ಬೆಂಬಲಿಸುತ್ತದೆ.

pixa bay

ಕಿವಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಜೀವಕೋಶಗಳನ್ನು ಹಾನಿಯಿಂದ ರಕ್ಷಿಸಲು ಸಹಾಯ ಮಾಡುತ್ತದೆ ಹಾಗೂ ಚರ್ಮದ ಆರೋಗ್ಯವನ್ನು ಬೆಂಬಲಿಸುತ್ತದೆ.

pixa bay

ಕಿವಿಯಲ್ಲಿ ಕಣ್ಣಿನ ಆರೋಗ್ಯವನ್ನು ಬೆಂಬಲಿಸುವ ಉತ್ಕರ್ಷಣ ನಿರೋಧಕಗಳಿವೆ. ಈ ಸಂಯುಕ್ತಗಳು ಯುವಿ ಕಿರಣಗಳಿಂದ ಉಂಟಾಗುವ ಹಾನಿಯಿಂದ ಕಣ್ಣುಗಳನ್ನು ರಕ್ಷಿಸಲು ಸಹಾಯ ಮಾಡುತ್ತದೆ.

pixa bay

ಕಿವಿ ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿದ್ದು, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

pixa bay

ಒಂದೇ ಒಂದು ಸೊಳ್ಳೆ ಇಲ್ಲದ ದೇಶವಿದು