ಪೇರಳೆಹಣ್ಣಿನ 9 ಆರೋಗ್ಯ ಪ್ರಯೋಜನಗಳು

Image Credits : Adobe Stock

By Priyanka Gowda
Jan 22, 2025

Hindustan Times
Kannada

ಸಿಹಿ ರುಚಿ ಮತ್ತು ಗಾಢ ಪರಿಮಳಕ್ಕೆ ಹೆಸರುವಾಸಿಯಾದ ಪೇರಳೆ ಪೌಷ್ಠಿಕಾಂಶದ ಶಕ್ತಿ ಕೇಂದ್ರವಾಗಿದ್ದು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವುದರಿಂದ ಹಿಡಿದು ಜೀರ್ಣಕ್ರಿಯೆಯನ್ನು ಸುಧಾರಿಸುವವರೆಗೆ ಹಲವು ಪ್ರಯೋಜನಗಳನ್ನು ನೀಡುತ್ತದೆ.

Image Credits : Adobe Stock

ವಿಟಮಿನ್ ಸಿ ಅಧಿಕವಾಗಿದ್ದು, ಪೇರಳೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ ಮತ್ತು ಶೀತ, ಕೆಮ್ಮಿನಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

Image Credits : Adobe Stock

ಪೇರಳೆಯಲ್ಲಿ ನಾರಿನಂಶವಿದ್ದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ನಿಯತ ಕರುಳಿನ ಚಲನೆಯನ್ನು ಉತ್ತೇಜಿಸುವ ಮೂಲಕ ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸುವ ಮೂಲಕ ಮಲಬದ್ಧತೆಯನ್ನು ತಡೆಯುತ್ತದೆ.

Image Credits : Adobe Stock

ಪೇರಳೆಯಲ್ಲಿ ಲೈಕೋಪೀನ್ ಮತ್ತು ವಿಟಮಿನ್ ಸಿ ನಂತಹ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ರಕ್ತದೊತ್ತಡವನ್ನು ಕಡಿಮೆ ಮಾಡಲು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಹೃದ್ರೋಗವನ್ನು ತಡೆಗಟ್ಟಲು ಸಹಾಯ ಮಾಡುತ್ತದೆ.

Image Credits : Adobe Stock

ಪೇರಳೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ. ಹಾಗೆಯೇ ಚರ್ಮದ ಆರೋಗ್ಯಕ್ಕೂ ಪ್ರಯೋಜನಕಾರಿ.

Image Credits : Adobe Stock

ಇದು ಮಧುಮೇಹಿಗಳಿಗೆ ಅತ್ಯುತ್ತಮ ಆಯ್ಕೆಯಾಗಿದೆ. ಏಕೆಂದರೆ ಪೇರಳೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತವೆ.

Image Credits : Adobe Stock

ಪೇರಳೆಯಲ್ಲಿ ಕಡಿಮೆ ಕ್ಯಾಲೊರಿಗಳಿವೆ ಆದರೆ ಫೈಬರ್ ಅಧಿಕವಾಗಿದೆ. ಇದು ಹಸಿವನ್ನು ನಿಯಂತ್ರಿಸಲು ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

Image Credits : Adobe Stock

ಪೇರಳೆ ಉರಿಯೂತ ನಿವಾರಕ ಸಂಯುಕ್ತಗಳನ್ನು ಹೊಂದಿದೆ. ಇದು ಸಂಧಿವಾತ ಮತ್ತು ಇತರ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Image Credits : Adobe Stock

ಪೇರಳೆಯಲ್ಲಿ ವಿಟಮಿನ್ ಎ ಅಂಶವಿದ್ದು, ಇವು ಕಣ್ಣಿನ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.

Image Credits : Adobe Stock

ಪೇರಳೆಯಲ್ಲಿ ಅಗತ್ಯ ಜೀವಸತ್ವಗಳು ಮತ್ತು ಖನಿಜಗಳಿವೆ. ವಿಶೇಷವಾಗಿ ವಿಟಮಿನ್ ಸಿ ಅನ್ನು ಹೊಂದಿರುತ್ತದೆ. ಇದು ಆರೋಗ್ಯಕರ ಗರ್ಭಧಾರಣೆಗೆ ಸಹಾಯಕವಾಗಿದೆ.

Image Credits : Adobe Stock

ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ

Image Credits : Adobe Stock

ಎರಡನೇ ಮಗುವಿನ ತಂದೆಯಾದ ಪ್ಯಾಟ್ ಕಮಿನ್ಸ್

File