ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ಸೇವನೆಯ ಪ್ರಯೋಜನಗಳಿವು
By Priyanka Gowda
Sep 07, 2024
Hindustan Times
Kannada
ಒಣದ್ರಾಕ್ಷಿಯು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ರಾತ್ರಿಯಿಡೀ ನೆನೆಸಿದ ಒಣದ್ರಾಕ್ಷಿಯನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ.
ಕಬ್ಬಿಣ ಮತ್ತು ಪೊಟ್ಯಾಶಿಯಮ್ ಸಮೃದ್ಧವಾಗಿದೆ. ಪ್ರತಿ ದಿನ ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.
ಒಣ ದ್ರಾಕ್ಷಿಯು ವಿಟಮಿನ್ ಸಿ, ಕೆ ಮತ್ತು ಬೀಟಾ ಕ್ಯಾರೊಟಿನ್ ಹೊಂದಿದ್ದು, ಇದರ ಸೇವನೆಯಿಂದ ಚರ್ಮದ ಆರೋಗ್ಯಕ್ಕೆ, ತ್ವಚೆಯ ಹೊಳಪು ಹೆಚ್ಚುತ್ತದೆ.
ಒಣ ದ್ರಾಕ್ಷಿಯಲ್ಲಿ ವಿಟಮಿನ್ ಬಿ ಮತ್ತು ಸಿ ಸಮೃದ್ಧವಾಗಿದೆ. ನೆನೆಸಿದ ಒಣದ್ರಾಕ್ಷಿಯನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ವೃದ್ಧಿಸುವಲ್ಲಿ ಸಹಕಾರಿ.
ಒಣ ದ್ರಾಕ್ಷಿಯಲ್ಲಿ ನಾರಿನಾಂಶ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಉತ್ತಮ. ಮಲಬದ್ಧತೆ, ಹೊಟ್ಟೆ ಉರಿಯಂತಹ ಸಮಸ್ಯೆಯೂ ನಿವಾರಣೆಯಾಗುತ್ತದೆ.
ಒಣ ದ್ರಾಕ್ಷಿಯಲ್ಲಿ ಕ್ಯಾಲ್ಸಿಯಂ ಅಂಶ ಇರುವುದರಿಂದ ಖಾಲಿ ಹೊಟ್ಟೆಯಲ್ಲಿ ಇದರ ಸೇವನೆಯು ಮೂಳೆಗಳ ಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ.
ಒಣದ್ರಾಕ್ಷಿಯು ಸ್ವಲ್ಪ ಪ್ರಮಾಣದ ನೀರನ್ನು ಹೊಂದಿರುತ್ತವೆ. ದೇಹವು ಹೈಡ್ರೇಟೆಡ್ ಆಗಿರಿಸುವಲ್ಲಿಯೂ ಇದು ಸಹಕಾರಿ.
freepik
ಒಣದ್ರಾಕ್ಷಿಯಲ್ಲಿರುವ ನಾರಿನಂಶವು ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಇದು ಹಸಿವನ್ನು ನಿಯಂತ್ರಿಸುವಲ್ಲೂ ಸಹಕಾರಿಯಾಗಿದೆ.
freepik
ಅಶ್ವಿನ್ ಸೇರಿ ವಿದಾಯ ಪಂದ್ಯವಾಡದ ಭಾರತದ ದಿಗ್ಗಜ ಕ್ರಿಕೆಟಿಗರು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ