ರೋಗನಿರೋಧಕ ಶಕ್ತಿ ವೃದ್ಧಿಯಿಂದ ಸಕ್ಕರೆ ಮಟ್ಟ ನಿಯಂತ್ರಣದವರೆಗೆ; ಅರಶಿನದ ಪ್ರಯೋಜನಗಳಿವು

pixa bay

By Priyanka Gowda
Nov 17, 2024

Hindustan Times
Kannada

ಅರಿಶಿನವು ರೋಗನಿರೋಧಕ ಶಕ್ತಿಯನ್ನು ಉತ್ತೇಜಿಸುವ ಗುಣಗಳನ್ನು ಹೊಂದಿದೆ. ಸೋಂಕುಗಳು ಮತ್ತು ರೋಗಗಳ ವಿರುದ್ಧ ದೇಹದ ರಕ್ಷಣಾ ಕಾರ್ಯವಿಧಾನಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

pixa bay

ಅರಶಿನದಲ್ಲಿರುವ ಕರ್ಕ್ಯುಮಿನ್ ಯಕೃತ್ತಿನ ಆರೋಗ್ಯಕ್ಕೆ ಸಹಕಾರಿಯಾಗಿದೆ. ವಿಷ, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡದಿಂದ ಹಾನಿಯಾಗದಂತೆ ರಕ್ಷಿಸುತ್ತದೆ.

pixa bay

ಹೃದಯದ ಆರೋಗ್ಯವನ್ನು ಬೆಂಬಲಿಸುವಲ್ಲಿ ಸಹಕಾರಿಯಾಗಿದೆ. ಇದು ರಕ್ತದ ಹರಿವನ್ನು ಸುಧಾರಿಸುತ್ತದೆ, ಹೆಪ್ಪುಗಟ್ಟುವಿಕೆಯ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ರಕ್ತದೊತ್ತಡವನ್ನು ನಿರ್ವಹಿಸಲು ಸಹಕಾರಿಯಾಗಿದೆ.

pixa bay

ಅರಶಿನದಲ್ಲಿರುವ ಕರ್ಕ್ಯುಮಿನ್ ಕ್ಯಾನ್ಸರ್ ವಿರೋಧಿ ಗುಣಲಕ್ಷಣಗಳನ್ನು ಹೊಂದಿದೆ. ಕ್ಯಾನ್ಸರ್ ಕೋಶಗಳ ಬೆಳವಣಿಗೆ ಮತ್ತು ಹರಡುವಿಕೆಯನ್ನು ತಡೆಯುವಲ್ಲಿ ಸಹಕಾರಿ ಎಂದು ಹೇಳಲಾಗಿದೆ.

pixa bay

ಅರಿಶಿನ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದೆ. ಮೊಡವೆ, ಎಸ್ಜಿಮಾ ಮತ್ತು ಸೋರಿಯಾಸಿಸ್ ಸೇರಿದಂತೆ ವಿವಿಧ ಚರ್ಮದ ಪರಿಸ್ಥಿತಿಗಳಿಗೆ ಚಿಕಿತ್ಸೆ ನೀಡಲು ಪರಿಣಾಮಕಾರಿಯಾಗಿದೆ.

pixa bay

ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡುವ ಮೂಲಕ ತೂಕ ನಿರ್ವಹಣೆಗೆ ಅರಶಿನವು ಸಹಕಾರಿಯಾಗಿದೆ. 

pixa bay

ಅರಶಿನವು ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

pixa bay

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಕೆಲವು ಅಧ್ಯಯನಗಳು ಸೂಚಿಸುತ್ತವೆ.

pixa bay

ಅರಿಶಿನವು ವ್ಯಾಪಕವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಅಲ್ಲದೆ ವಿವಿಧ ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು.

pixa bay

ಕೊಹ್ಲಿ-ಧೋನಿ ಬಳಿಕ ರೋಹಿತ್ ಮುಜುಗರದ ದಾಖಲೆ