ಬಾಳೆಹಣ್ಣಿನಲ್ಲಿ ದೇಹಕ್ಕೆ ಅಗತ್ಯವಾಗಿರುವ ಪೋಷಕಾಂಶಗಳು ಸಮೃದ್ಧವಾಗಿದೆ. ಇದನ್ನು ಪ್ರತಿನಿತ್ಯ ತಿನ್ನುವುದರಿಂದ ಹಲವು ಪ್ರಯೋಜನಗಳಿವೆ.
ದಿನಕ್ಕೊಂದು ಬಾಳೆಹಣ್ಣು ತಿನ್ನುವುದರಿಂದ ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನಗಳಿವೆ ನೋಡಿ.
ಬಾಳೆಹಣ್ಣಿನಲ್ಲಿ ನಾರಿನಾಂಶ ಸಮೃದ್ಧವಾಗಿರುವ ಕಾರಣ ಇದು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸುತ್ತದೆ. ಅತಿಸಾರ, ಮಲಬದ್ಧತೆ, ಅಜೀರ್ಣದಂತಹ ಸಮಸ್ಯೆಗಳನ್ನು ಪರಿಹರಿಸುತ್ತದೆ.
ಬಾಳೆಹಣ್ಣು ಕ್ಯಾಲ್ಸಿಯಂ ಸಮೃದ್ಧವಾಗಿದೆ. ಪ್ರತಿದಿನ ಒಂದೊಂದು ಬಾಳೆಹಣ್ಣು ತಿನ್ನುವುದರಿಂದ ಮೂಳೆಗಳು ಸದೃಢವಾಗುತ್ತವೆ. ಇದು ಮೂಳೆಯ ಸಾಂದ್ರತೆಯನ್ನು ಹೆಚ್ಚಿಸುತ್ತದೆ.
ಬಾಳೆಹಣ್ಣಿನಲ್ಲಿರುವ ಪೊಟ್ಯಾಶಿಯಂ ಅಂಶವು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಬಿಪಿ ರೋಗಿಗಳು ದಿನಕ್ಕೊಂದು ಬಾಳೆಹಣ್ಣು ತಿನ್ನುವುದು ಉತ್ತಮ.
ಬಾಳೆಹಣ್ಣು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅಂಶವನ್ನು ಹೊರ ಹಾಕಲು ಸಹಾಯ ಮಾಡುತ್ತದೆ. ಇವು ಎಲ್‌ಡಿಎಲ್ ಅಥವಾ ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತವೆ.
ಬಾಳೆಹಣ್ಣು ನಿಯಮಿತವಾಗಿ ಸೇವಿಸುವುದರಿಂದ ಕೊಲೆಸ್ಟ್ರಾಲ್ ಹಾಗೂ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಇದು ಹೃದಯ ಸಂಬಂಧಿ ಅಪಾಯಗಳನ್ನೂ ಕಡಿಮೆ ಮಾಡುತ್ತದೆ.
ಬಾಳೆಹಣ್ಣಿನಲ್ಲಿರುವ ವಿಟಮಿನ್ ಬಿ6 ಮೆದುಳಿನ ಕೋಶಗಳನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಬಾಳೆಹಣ್ಣು ತಿನ್ನುವುದರಿಂದ ನೆನಪಿನ ಶಕ್ತಿ ಸುಧಾರಿಸುತ್ತದೆ.
ಬಾಳೆಹಣ್ಣಿನಲ್ಲಿರುವ ಟ್ರಿಫ್ಟೊಫಾನ್ ಎಂಬ ವಸ್ತುವು ದೇಹದಲ್ಲಿ ಸಿರೊಟೋನಿನ್ ಹಾರ್ಮೋನ್ ಅನ್ನು ಉತ್ಪಾದಿಸುತ್ತದೆ. ಇದು ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ಬಾಳೆಹಣ್ಣು ತಿನ್ನುವುದರಿಂದ ದೇಹಕ್ಕೆ ತ್ವರಿತ ಶಕ್ತಿ ಸಿಗುತ್ತದೆ. ಇದರಲ್ಲಿರುವ ಕಾರ್ಬೊಹೈಡ್ರೇಟ್ ಹಸಿವಿನಿಂದ ಉಂಟಾಗುವ ದೌರ್ಬಲ್ಯವನ್ನು ತಡೆಯುತ್ತದೆ.
ಬಾಳೆಹಣ್ಣು ಸ್ತ್ರೀಯರಲ್ಲಿ ಫಲವಂತಿಕೆಯ ಪ್ರಮಾಣವನ್ನು ಹೆಚ್ಚಿಸಿದರೆ, ಪುರುಷರಲ್ಲಿ ವೀರ್ಯಾಣುವಿನ ಸಂಖ್ಯೆಯನ್ನು ಹೆಚ್ಚಿಸುತ್ತದೆ. ಹಾಗಾಗಿ ಇದು ಗರ್ಭಧಾರಣೆಗೂ ಉತ್ತಮ.
ಬಾಳೆಹಣ್ಣು ತಿನ್ನುವುದರಿಂದ ಪುರುಷರ ವೀರ್ಯಾಣು ಸಂಖ್ಯೆಯನ್ನು ಹೆಚ್ಚುವುದು, ಮಾತ್ರವಲ್ಲ ಇದು ವೀರ್ಯದ ಗುಣಮಟ್ಟವನ್ನು ಸುಧಾರಿಸುತ್ತದೆ. ಇದು ಉತ್ತಮ ಲೈಂಗಿಕ ಜೀವನಕ್ಕೆ ಅವಶ್ಯ.
ಈ ಮಾಹಿತಿಯು ಸಾಮಾನ್ಯಜ್ಞಾನವನ್ನು ಆಧರಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ.