ಬಿಪಿ ಕಂಟ್ರೋಲ್ ಮಾಡುವ ಹಣ್ಣುಗಳಿವು

By Reshma
Jun 19, 2024

Hindustan Times
Kannada

ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಬಹಳ ಮುಖ್ಯ. ಇದು ಇತರ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. 

ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಕೆಲವು ಆಹಾರಕ್ರಮಗಳನ್ನು ಅನುಸರಿಸಬೇಕು. 

ಕೆಲವು ಹಣ್ಣುಗಳ ಸೇವನೆಯಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು ಎನ್ನುತ್ತಾರೆ ತಜ್ಞರು. ಆದರೆ ಇದರಿಂದ ಬಿಪಿ ಗುಣಪಡಿಸಲು ಸಾಧ್ಯವಿಲ್ಲ ಎನ್ನುವುದನ್ನು ಮರೆಯಬೇಡಿ. 

ಈ ಮಾರಣಾಂತಿಕ ಸಮಸ್ಯೆಯನ್ನು ನಿಯಂತ್ರಿಸಲು ನಾವು ಬಹಳ ಎಚ್ಚರಿಕೆಯಿಂದ ಇರಬೇಕು. ಇಲ್ಲದಿದ್ದರೆ ಇದು ಮೆದುಳಿನ ರಕ್ತಸ್ರಾವ ಹಾಗೂ ಪಾರ್ಶ್ವವಾಯುವಿನ ಅಪಾಯವನ್ನು ಹೆಚ್ಚಿಸುತ್ತದೆ. 

ಕೆಲವು ಹಣ್ಣುಗಳು ರಕ್ತದೊತ್ತಡವನ್ನು ನಿಯಂತ್ರಣದಲ್ಲಿ ಇಡಬಹುದು. ಅವುಗಳ ನಿಯಮಿತ ಸೇವನೆಯಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ.  

ಬಾಳೆಹಣ್ಣು ತುಂಬಾ ಪೌಷ್ಟಿಕವಾಗಿದೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ನಿವಾರಿಸುತ್ತದೆ. ಅಧಿಕ ರಕ್ತದೊತ್ತಡಕ್ಕೆ ಬಾಳೆಹಣ್ಣಿನಲ್ಲಿರುವ ಪೋಷಕಾಂಶಗಳು ರಾಮಬಾಣ. ಇದನ್ನು ಪ್ರತಿದಿನ ಸೇವಿಸುವುದರಿಂದ ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. 

ಮಾವು ಹಲವು ಸಮಸ್ಯೆಗಳಿಂದ ನಮ್ಮನ್ನು ರಕ್ಷಿಸುತ್ತದೆ. ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ಮಾವಿನಹಣ್ಣು ತುಂಬಾ ಪ್ರಯೋಜನಕಾರಿ. ಇದರಲ್ಲಿರುವ ಬೀಟಾ ಕ್ಯಾರೊಟಿನ್‌ ಹಾಗೂ ನಾರಿನಾಂಶ ಆರೋಗ್ಯಕ್ಕೆ ಉತ್ತಮ.

ಕಿವಿ ಹಣ್ಣು ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಪೋಷಕಾಂಶಗಳನ್ನು ಒಳಗೊಂಡಿದೆ. ಇದು ಉತ್ಕರ್ಷಣ ನಿರೋಧಕಗಳು ಹಾಗೂ ಖನಿಜಗಳಿಂದ ಸಮೃದ್ಧವಾಗಿದೆ. ಇದು ಜೀರ್ಣಾಂಗವ್ಯವಸ್ಥೆಯ ಸುಧಾರಣೆಗೆ ಸಹಕಾರಿ. ದೇಹದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಲು ಕೂಡ ಉತ್ತಮ. 

ಯುದ್ಧದಿಂದ ನಡೆದಿರಲಿಲ್ಲ ಆ ಐದು ಒಲಿಂಪಿಕ್ಸ್​ಗಳು!