ಖಾಲಿ ಹೊಟ್ಟೆಯಲ್ಲಿ ಮೆಂತ್ಯದ ನೀರು ಕುಡಿಯುವುದರಿಂದಾಗುವ ಪ್ರಯೋಜನಗಳು

By Reshma
Jun 19, 2024

Hindustan Times
Kannada

ಮೆಂತ್ಯೆ ಕಹಿಯಾಗಿದ್ದರೂ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ಹಲವು ಪೋಷಕಾಂಶಗಳು ಮತ್ತು ಖನಿಜಾಂಶಗಳನ್ನು ಒಳಗೊಂಡಿದೆ. 

ಮೆಂತ್ಯವನ್ನು ನೀರಿನಲ್ಲಿ ನೆನೆಸಿ ಕುಡಿಯುವುದರಿಂದ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಗಳಿವೆ. 

ಮೆಂತ್ಯೆ ಕಾಳನ್ನು ನೆನೆಸಿಟ್ಟು ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಹಲವು ಕಾಯಿಲೆಗಳು ನಿವಾರಣೆಯಾಗುತ್ತವೆ. ಇದರಿಂದ ಅಜೀರ್ಣ, ಹೊಟ್ಟೆಯುಬ್ಬರ, ಮಲಬದ್ಧತೆಯಂತಹ ಸಮಸ್ಯೆಗಳು ನಿವಾರಣೆಯಾಗುತ್ತವೆ. 

ಮೆಂತ್ಯೆ ನೀರು ಹಸಿವನ್ನು ಕಡಿಮೆ ಮಾಡುತ್ತದೆ. ಚಯಾಪಚಯವನ್ನು ಹೆಚ್ಚಿಸುತ್ತದೆ. ಕೊಬ್ಬಿನ ಶೇಖರಣೆಯನ್ನು ಕಡಿಮೆ ಮಾಡುತ್ತದೆ. ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಒಟ್ಟಾರೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ. 

ಖಾಲಿ ಹೊಟ್ಟೆಯಲ್ಲಿ ಮೆಂತ್ಯೆ ನೀರು ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. ಇದು ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. 

ಮೆಂತ್ಯವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಉರಿಯೂತವನ್ನು ಕಡಿಮೆ ಮಾಡುತ್ತೆ. ಇದು ಸೋಂಕುಗಳಿಂದ ದೇಹವನ್ನು ರಕ್ಷಿಸುತ್ತದೆ. 

ಇದು ಮುಟ್ಟಿನ ನೋವನ್ನು ಕಡಿಮೆ ಮಾಡುತ್ತದೆ. ಇದು ಮುಟ್ಟಿನ ಸೆಳೆತ ಹಾಗೂ ಹೊಟ್ಟೆಯುಬ್ಬರದಂತಹ ರೋಗಲಕ್ಷಣಗಳನ್ನು ನಿವಾರಿಸಲು ಪ್ರಯೋಜನಕಾರಿ. 

ಮೆಂತ್ಯೆವನ್ನು ನೆನೆಸಿ ಅರೆದು ತಲೆಗೆ ಹಚ್ಚಿದರೆ ಕೂದಲಿನ ಆರೋಗ್ಯಕ್ಕೂ ಉತ್ತಮ. 

ಎಸ್‌ ಜಾನಕಿ ಎಷ್ಟು ಭಾಷೆಗಳಲ್ಲಿ ಹಾಡಿದ್ದಾರೆ ಗೊತ್ತೆ