ರಾತ್ರಿ ಮಲಗುವ ಮೊದಲು ಒಂದು ಲೋಟ ಬಿಸಿ ನೀರು ಕುಡಿದ್ರೆ ಇಷ್ಟೆಲ್ಲಾ ಲಾಭ

By Reshma
Jul 16, 2024

Hindustan Times
Kannada

ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿ ನೀರು ಕುಡಿಯುವುದು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎನ್ನುತ್ತಾರೆ ತಜ್ಞರು. ಇದರಿಂದ ಸಾಕಷ್ಟು ಉತ್ತಮ ಫಲಿತಾಂಶಗಳನ್ನು ನಿರೀಕ್ಷೆ ಮಾಡಬಹುದು.

ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ದೇಹದ ಉಷ್ಣತೆ ಹೆಚ್ಚುತ್ತದೆ. ಇದು ರಕ್ತಪರಿಚಲನೆಯನ್ನು ಸುಧಾರಿಸುತ್ತದೆ, ಬೆವರುವ ಮೂಲಕ ದೇಹದಲ್ಲಿನ ಉಷ್ಣಾಂಶಗಳು ಹೊರ ಹೋಗುತ್ತವೆ. 

ಮಲಬದ್ಧತೆ ಅಥವಾ ಯಾವುದೇ ರೀತಿಯ ಹೊಟ್ಟೆ ಸಮಸ್ಯೆಗಳಿದ್ದರೆ, ರಾತ್ರಿ ಮಲಗುವ ಮುನ್ನ ಬೆಚ್ಚಗಿನ ನೀರು ಕುಡಿಯಬೇಕು. ಇದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. 

ಮಲಬದ್ಧತೆ, ಗ್ಯಾಸ್ಟ್ರಿಕ್‌, ಹೊಟ್ಟೆಯುಬ್ಬರದಂತಹ ಸಮಸ್ಯೆಗಳ ನಿವಾರಣೆಗೆ ಬಿಸಿನೀರು ಕುಡಿಯುವುದು ಬಹಳ ಮುಖ್ಯ. ಇದರಿಂದ ಹೊಟ್ಟೆ ಶುದ್ಧವಾಗುತ್ತದೆ. ಒಟ್ಟಾರೆ ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ. 

ತೂಕ ಇಳಿಸಿಕೊಳ್ಳಲು ಪ್ರಯತ್ನದಲ್ಲಿರುವವರು ರಾತ್ರಿ ಮಲಗುವ ಮುನ್ನ ಒಂದು ಲೋಟ ಬಿಸಿನೀರು ಕುಡಿಯಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. 

ಅಧಿಕ ತೂಕ ಹೊಂದಿರುವವರು ಪ್ರತಿ ರಾತ್ರಿ ತಪ್ಪದೇ ಬಿಸಿನೀರು ಕುಡಿಯಬೇಕು. 

ಬೆಳಗಿನ ಜಾವಕ್ಕಿಂತ ರಾತ್ರಿ ಮಲಗುವ ಮುನ್ನ ಬಿಸಿನೀರು ಕುಡಿಯುವುದರಿಂದ ತೂಕದಲ್ಲಿ ವೇಗವಾಗಿ ಬದಲಾವಣೆ ಕಾಣಬಹುದು. ಇದು ಚಯಾಪಚಯವನ್ನು ಸುಧಾರಿಸುತ್ತದೆ ಎಂಬುದು ತಜ್ಞರ ಅಭಿಪ್ರಾಯ.   

ಮನೆಯಲ್ಲಿಯೇ ಮಾಡಿ ಆರೋಗ್ಯಕರ, ರುಚಿಕರ ಟಿಕ್ಕಿ

Adobe Stock