ವಿಭಿನ್ನ ಪರಿಮಳ, ಹುಳಿ ರುಚಿಯ ಕಾರಣದಿಂದ ಮಾವಿನಕಾಯಿ ಹಲವರಿಗೆ ಫೇವರಿಟ್. ಇದರಲ್ಲಿ ಉತ್ಕರ್ಷಣ ನಿರೋಧಕ ಗುಣ ಹಾಗೂ ವಿಟಮಿನ್ ಸಿ ಸಮೃದ್ಧವಾಗಿದೆ. ಇದನ್ನು ತಿನ್ನುವುದರಿಂದ ಆರೋಗ್ಯಕ್ಕಾಗುವ 7 ಲಾಭಗಳೇನು ಎಂಬುದನ್ನು ತಿಳಿಯೋಣ.
ಮಾವಿನಕಾಯಿ ವಿಟಮಿನ್ ಸಿಯಿಂದ ಸಮೃದ್ಧವಾಗಿರುತ್ತದೆ.
ಮಾವಿನಕಾಯಿ ವಿಟಮಿನ್ ಸಿಯಿಂದ ಸಮೃದ್ಧವಾಗಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಅವಶ್ಯವಾಗಿದೆ. ಇದು ಉತ್ಕರ್ಷಣ ನಿರೋಧಕವಾಗಿ ಕಾರ್ಯನಿರ್ವಹಿಸುತ್ತದೆ. ಜೀವಕೋಶಗಳ ಹಾನಿಯಿಂದ ರಕ್ಷಿಸುತ್ತದೆ. ಹೃದ್ರೋಗದಂತಹ ದೀರ್ಘಕಾಲದ ಆರೋಗ್ಯ ಸಮಸ್ಯೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಚರ್ಮದ ಆರೋಗ್ಯ ವೃದ್ಧಿಸುತ್ತದೆ
ಮಾವಿನಕಾಯಿಯಲ್ಲಿ ವಿಟಮಿನ್ ಎ ಮತ್ತು ಸಿ ಅಂಶ ಅಧಿಕವಾಗಿದ್ದು, ಇದು ಚರ್ಮದ ಆರೋಗ್ಯಕ್ಕೆ ಉತ್ತಮ. ಇದು ಕಾಲಜನ್ ಉತ್ಪಾದನೆಗೆ ನೆರವಾಗುತ್ತದೆ. ಇದರಿಂದ ಚರ್ಮ ಬಿಗಿಗೊಂಡು ಸುಕ್ಕು, ನೆರಿಗೆ ಉಂಟಾಗುವುದನ್ನು ತಡೆಯುತ್ತದೆ.
ಜೀರ್ಣಕ್ರಿಯೆಯನ್ನು ವೃದ್ಧಿಸುತ್ತದೆ
ಮಾವಿನಕಾಯಿಯಲ್ಲಿರುವ ಕಿಣ್ವಗಳು ಕಾಬೋಹ್ರೈಡೇಟ್‌ಗಳನ್ನು ಸರಳವಾದ ಸಕ್ಕರೆಗಳಾಗಿ ವಿಭಜಿಸಲು ಸಹಾಯ ಮಾಡುತ್ತದೆ. ಇದು ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ. ಇದರಲ್ಲಿರುವ ನಾರಿನಾಂಶ ಕರುಳಿನ ಚಲನೆಯನ್ನು ನಿಯಂತ್ರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯವನ್ನು ವೃದ್ಧಿಸುತ್ತದೆ
ಮಾವಿನಕಾಯಿಯಲ್ಲಿರುವ ನಿಯಾಸಿನ್ (ವಿಟಮಿನ್ ಬಿ3) ರಕ್ತ ಪರಿಚಲನೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನಾರಿನಾಂಶ ಮತ್ತು ಉತ್ಕರ್ಷಣ ನಿರೋಧಕಗಳು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವ ಮೂಲಕ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ರಕ್ತದಲ್ಲಿನ ಸಕ್ಕರೆಯ ಪ್ರಮಾಣವನ್ನು ಸುಧಾರಿಸುತ್ತದೆ
ಮಾವಿನಕಾಯಿಯಲ್ಲಿ ಕಡಿಮೆ ಗ್ಲೈಸೆಮಿಕ್ ಅಂಶವಿದ್ದು ಇದು ಮಧುಮೇಹಗಳಿಗೆ ಉತ್ತಮ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಕಣ್ಣಿನ ಆರೋಗ್ಯವನ್ನು ಸುಧಾರಿಸುತ್ತದೆ
ವಿಟಮಿನ್ ಎ ಮತ್ತು ಬೀಟಾ ಕ್ಯಾರೋಟಿನ್‌ನಲ್ಲಿ ಸಮೃದ್ಧವಾಗಿರುವ ಮಾವಿನಕಾಯಿ ದೃಷ್ಟಿ ಸುಧಾರಣೆಗೆ ಸಹಾಯ ಮಾಡುತ್ತದೆ. ಇರುಳುಗಣ್ಣು ಮತ್ತು ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್‌ನಂತಹ ಕಣ್ಣಿಗೆ ಸಂಬಂಧಿಸಿದ ತೊಂದರೆಗಳನ್ನು ತಡೆಯುತ್ತದೆ.
ನಿರ್ಜಲೀಕರಣವನ್ನು ತಡೆಯುತ್ತದೆ
ಆಮ್ ಪನ್ನಾದಂತಹ ಸಾಂಪ್ರದಾಯಿಕ ಪಾನೀಯಗಳನ್ನು ಸೇವಿಸುವುದರಿಂದ ಎಲೆಕ್ಟ್ರೋಲೈಟ್ ಅಂಶ ಮರುಪೂರಣಗೊಳಿಸುತ್ತದೆ ಮತ್ತು ಇದು ನಿರ್ಜಲೀಕರಣವನ್ನು ತಡೆಯಲು ಸಹಾಯ ಮಾಡುತ್ತದೆ.