ಪ್ರತಿ ದಿನ ಸೇಬು ಸೇವಿಸುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳಿವು

Pexels

By Priyanka Gowda
Sep 08, 2024

Hindustan Times
Kannada

ಸೇಬುಗಳಲ್ಲಿ ನಾರಿನಾಂಶವಿದ್ದು, ಆಹಾರವನ್ನು ಉತ್ತಮವಾಗಿ ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

Pexels

ಸೇಬಿನಲ್ಲಿರುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ರಕ್ತದೊತ್ತಡವನ್ನು ಸುಧಾರಿಸಲು ಸಹಕಾರಿ.

Pexels

ಸೇಬು ಕಡಿಮೆ ಕ್ಯಾಲೋರಿಗಳನ್ನು ಹೊಂದಿದ್ದು, ಹೊಟ್ಟೆ ತುಂಬಿದ ಅನುಭವ ನೀಡುತ್ತದೆ. ಹೀಗಾಗಿ ತೂಕ ಇಳಿಕೆಗೆ ಸೇಬು ಉತ್ತಮ.

Pexels

ಸೇಬಿನಲ್ಲಿರುವ ಫೈಬರ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಟೈಪ್ 2 ಮಧುಮೇಹ ತಡೆಗಟ್ಟುವಲ್ಲೂ ಪ್ರಮುಖ ಪಾತ್ರ ವಹಿಸುತ್ತದೆ.

Pexels

ಸೇಬುಗಳನ್ನು ಜಗಿಯುವುದರಿಂದ ಲಾಲಾರಸ ಉತ್ಪಾದನೆಯನ್ನು ಉತ್ತೇಜಿಸಬಹುದು. ಇದು ಬಾಯಿಯಲ್ಲಿ ಬ್ಯಾಕ್ಟೀರಿಯಾದ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

Pexels

ಸೇಬು ನೀರಿನಂಶವನ್ನು ಹೊಂದಿದ್ದು, ದೇಹವನ್ನು ಹೈಡ್ರೇಟೆಡ್ ಆಗಿರಿಸುವಲ್ಲಿ ಸಹಕಾರಿ. ಒಟ್ಟಾರೆ ಆರೋಗ್ಯಕ್ಕೆ ಕೊಡುಗೆ ನೀಡುತ್ತದೆ.

Pexels

ವಿಟಮಿನ್ ಎ ಮತ್ತು ಸಿ, ಪೊಟ್ಯಾಶಿಯಮ್‍ನಂತಹ ಅಗತ್ಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ಆಕ್ಸಿಡೇಟಿವ್ ಒತ್ತಡವನ್ನು ನಿವಾರಿಸಲು ಸಹಾಯ ಮಾಡುತ್ತದೆ.

Pexels

ಸೇಬುಗಳಲ್ಲಿನ ಉತ್ಕರ್ಷಣ ನಿರೋಧಕಗಳು ಮೆದುಳಿನ ಕೋಶಗಳನ್ನು ಹಾನಿಯಿಂದ ರಕ್ಷಿಸಲು ಮತ್ತು ಅರಿವಿನ ಕಾರ್ಯವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯಲ್ಲಿ ತಿಳಿದುಬಂದಿದೆ.

Pexels

ಪಿಕೆಎಲ್​ 12 ತಂಡಗಳ ಮಾಲೀಕರು ಯಾರು?