ಒಣದ್ರಾಕ್ಷಿ ತಿನ್ನುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ
freepik
By Priyanka Gowda
Jan 04, 2025
Hindustan Times
Kannada
ಒಣದ್ರಾಕ್ಷಿಯಲ್ಲಿ ಕಬ್ಬಿಣ, ಬೋರಾನ್, ಕ್ಯಾಲ್ಸಿಯಂ, ಆಂಟಿಮೈಕ್ರೊಬಿಯಲ್ ಮತ್ತು ಉತ್ಕರ್ಷಣ ನಿರೋಧಕಗಳಂತಹ ಸಂಯುಕ್ತಗಳಿಂದ ಸಮೃದ್ಧವಾಗಿದೆ.
ಇವುಗಳನ್ನು ಹಿಂದಿನ ದಿನ ನೆನೆಸಿಟ್ಟು ಬೆಳಗ್ಗೆ ತಿಂದರೆ ಉತ್ತಮ.
ಒಣದ್ರಾಕ್ಷಿ ಮೆಲಟೋನಿನ್ ಎಂಬ ಹಾರ್ಮೋನ್ ಅನ್ನು ಹೊಂದಿರುತ್ತದೆ. ಇದು ನಿದ್ದೆಯ ಚಕ್ರವನ್ನು ನಿಯಂತ್ರಿಸುತ್ತದೆ.
ಒಣದ್ರಾಕ್ಷಿ ಆಂಟಿ-ವೈರಲ್, ಆ್ಯಂಟಿ ಬ್ಯಾಕ್ಟೀರಿಯಾ ಮತ್ತು ಆ್ಯಂಟಿ ಫಂಗಲ್ ಗುಣಗಳಿಂದ ಕೂಡಿದೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.
ಒಣದ್ರಾಕ್ಷಿಯಲ್ಲಿ ಕಡಿಮೆ ಕೊಬ್ಬಿನಂಶವಿದ್ದು, ತ್ವಚೆಯ ಆರೋಗ್ಯಕ್ಕೆ ಒಳ್ಳೆಯದು. ಏಕೆಂದರೆ ಅವು ಜೀವಕೋಶಗಳನ್ನು ಹಾನಿಯಿಂದ ರಕ್ಷಿಸುತ್ತವೆ.
ಒಣದ್ರಾಕ್ಷಿಯು ಪೋಷಕಾಂಶಗಳಿಂದ ಸಮೃದ್ಧವಾಗಿದ್ದು, ಕೂದಲು ಉದುರುವಿಕೆ ತಡೆಗಟ್ಟಲು ಸಹಕಾರಿ.
ದ್ರಾಕ್ಷಿಯಲ್ಲಿ ಒಲಿಯನೋಲಿಕ್ ಎಂಬ ಫೈಟೊಕೆಮಿಕಲ್ ಇದ್ದು, ಇದು ಹಲ್ಲುಗಳನ್ನು ಕೊಳೆಯದಂತೆ ರಕ್ಷಿಸುವಲ್ಲಿ ಸಹಕಾರಿ.
ಬಾಲಿವುಡ್ ನಟಿ ರವೀನಾ ಟಂಡನ್ ಮಸ್ತ್ ಮಸ್ತ್ ಫೋಟೋಗಳು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ