ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರ ಪ್ರಯೋಜನಗಳು ಹಲವು
freepik
By Priyanka Gowda Dec 27, 2024
Hindustan Times Kannada
ಪಪ್ಪಾಯಿ ತಿನ್ನುವುದರಿಂದ ಅನೇಕ ಪ್ರಯೋಜನಗಳಿವೆ. ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರ 6 ಪ್ರಯೋಜನಗಳು ಇಲ್ಲಿವೆ.
freepik
ಪಪ್ಪಾಯಿಯಲ್ಲಿರುವ ಪಾಪೈನ್ ಎಂಬ ಕಿಣ್ವವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ದಿನವಿಡೀ ಅಜೀರ್ಣ ಸಮಸ್ಯೆ ಇರುವುದಿಲ್ಲ.
freepik
ಪಪ್ಪಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣಾ ನಿರೋಧಕಗಳು ಸಮೃದ್ಧವಾಗಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ.
freepik
ಪಪ್ಪಾಯಿ ಕಡಿಮೆ ಕ್ಯಾಲೋರಿ ಮತ್ತು ಹೆಚ್ಚಿನ ಫೈಬರ್ ಹೊಂದಿದೆ. ಇದು ತೂಕ ಇಳಿಕೆಗೆ ಸಹಾಯ ಮಾಡುತ್ತದೆ.
freepik
ಪಪ್ಪಾಯಿಯಲ್ಲಿರುವ ಆಂಟಿಆಕ್ಸಿಡೆಂಟ್ ಮತ್ತು ವಿಟಮಿನ್ ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ. ಮೊಡವೆಗೂ ಪರಿಣಾಮಕಾರಿ ಪರಿಹಾರ ಒದಗಿಸುತ್ತದೆ.
freepik
ಪಪ್ಪಾಯಿಯಲ್ಲಿರುವ ಪೊಟ್ಯಾಸಿಯಂ, ಆಂಟಿಆಕ್ಸಿಡೆಂಟ್ ಮತ್ತು ಫೈಬರ್ ಶರೀರದ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
freepik
ಪಪ್ಪಾಯಿಯನ್ನು ನಿಯತವಾಗಿ ಸೇವಿಸುವುದರಿಂದ ದೇಹದಿಂದ ಕಲ್ಮಶಗಳನ್ನು ತೆಗೆದುಹಾಕುತ್ತದೆ. ಯಕೃತ್ತು ಮತ್ತು ಮೂತ್ರಪಿಂಡಗಳ ಕಾರ್ಯವನ್ನು ಸುಧಾರಿಸುತ್ತದೆ.
freepik
(ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ)