ಪ್ರತಿದಿನ ಹಸಿಮೆಣಸಿನಕಾಯಿ ತಿನ್ನುವುದರ 7 ಆರೋಗ್ಯ ಪ್ರಯೋಜನಗಳು
Pinterest
By Priyanka Gowda Jan 24, 2025
Hindustan Times Kannada
ಹಸಿಮೆಣಸಿನಕಾಯಿಯಲ್ಲಿ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಹೃದ್ರೋಗಗಳು ಮತ್ತು ಕ್ಯಾನ್ಸರ್ ಅನ್ನು ಸಹ ತಡೆಯಬಹುದು.
Pixabay
ಹಸಿಮೆಣಸಿನಕಾಯಿಯಲ್ಲಿರುವ ಕಡಿಮೆ ಗ್ಲೈಸೆಮಿಕ್ ಸೂಚ್ಯಂಕವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಹೃದ್ರೋಗ ಮತ್ತು ಪಾರ್ಶ್ವವಾಯುವನ್ನು ತಡೆಯುತ್ತದೆ.
Pixahive
ಹಸಿಮೆಣಸಿನಕಾಯಿ ಕಣ್ಣಿನ ದೃಷ್ಟಿಯನ್ನು ಸುಧಾರಿಸುತ್ತದೆ. ರೆಟಿನಾವನ್ನು ರಕ್ಷಿಸುತ್ತದೆ.
Pixahive
ಹಸಿಮೆಣಸಿನಕಾಯಿಯಲ್ಲಿ ವಿಟಮಿನ್ ಕೆ ಜೊತೆಗೆ ಉರಿಯೂತ ನಿವಾರಕ ಗುಣಗಳು ಸಮೃದ್ಧವಾಗಿವೆ. ಅವು ಮೂಳೆಗಳನ್ನು ಬಲಪಡಿಸುತ್ತವೆ.
Pixahive
ಹಸಿಮೆಣಸಿನಕಾಯಿಯಲ್ಲಿರುವ ವಿಟಮಿನ್ ಸಿ, ಬಿ 6, ಫೋಲೇಟ್, ಮ್ಯಾಂಗನೀಸ್ ಮತ್ತು ಉತ್ಕರ್ಷಣ ನಿರೋಧಕಗಳು ಜೀರ್ಣಕ್ರಿಯೆಯನ್ನು ಸುಧಾರಿಸುತ್ತವೆ.
Pixabay
ಹಸಿಮೆಣಸಿನಕಾಯಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಆರೋಗ್ಯವನ್ನು ರಕ್ಷಿಸುತ್ತದೆ. ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
Pixabay
ಹಸಿಮೆಣಸಿನಕಾಯಿಯ ಉರಿಯೂತ ನಿವಾರಕ ಗುಣಗಳು, ಕಡಿಮೆ ಕ್ಯಾಲೊರಿಯಿಂದಾಗಿ ತೂಕ ಇಳಿಕೆಗೆ ಸಹಾಯ ಮಾಡುತ್ತದೆ. ಇವುಗಳಲ್ಲಿ ಫೈಬರ್, ಜೀವಸತ್ವಗಳು ಮತ್ತು ಖನಿಜಗಳು ಹೇರಳವಾಗಿದೆ.
Pixabay
ಹಸಿಮೆಣಸಿನಕಾಯಿಯಲ್ಲಿರುವ ಪೋಷಕಾಂಶಗಳು ಚರ್ಮದ ಆರೋಗ್ಯವನ್ನು ಸುಧಾರಿಸುತ್ತವೆ. ಚರ್ಮದ ಸೋಂಕುಗಳ ವಿರುದ್ಧ ಹೋರಾಡುತ್ತದೆ.
Pixabay
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ
Pinterest
ಜಿಎಸ್ ಶಿವರುದ್ರಪ್ಪ ಜನ್ಮದಿನದಂದು ಅವರ 10 ಜನಪ್ರಿಯ ಭಾವಗೀತೆಗಳು