ತೂಕ ಇಳಿಕೆಗೆ ನೆರವಾಗುವ 7 ಜ್ಯೂಸ್‌ಗಳಿವು; ಪ್ರಯತ್ನಿಸಿ ನೋಡಿ
By Raghavendra M Y Oct 07, 2024
Hindustan Times Kannada
ಕ್ಯಾರೆಟ್ ಜ್ಯೂಸ್‌ನಲ್ಲಿ ಪೋಷಕಾಂಶಗಳ ಜೊತೆಗೆ ಫೈಬರ್ ಸಮೃದ್ಧವಾಗಿದೆ. ಇದು ತೂಕ ಇಳಿಕೆಗೆ ಸಹಾಯ ಮಾಡುತ್ತೆ. ಕ್ಯಾರೆಟ್ ಜ್ಯೂಸ್‌ನಲ್ಲಿರುವ ಬೀಟಾ ಕ್ಯಾರೋಟಿನ್ ಕಣ್ಣಿನ ಆರೋಗ್ಯಕ್ಕೆ ಒಳ್ಳೆಯದು
ಪಾಲಕ್ ಜ್ಯೂಸ್ ತೂಕ ನಷ್ಟಕ್ಕೆ ಸಹಾಯ ಮಾಡುತ್ತೆ. ಪಾಲಕ್ ಸೊಪ್ಪು ಕಡಿಮೆ ಕ್ಯಾಲೋರಿಯನ್ನು ಹೊಂದಿದೆ
ಸೆಲರಿ ಜ್ಯೂಸ್ ಉಷ್ಕರ್ಣ ನಿರೋಧಕಗಳನ್ನು ಹೊಂದಿರುತ್ತದೆ. ಹೆಚ್ಚಿನ ನೀರಿನ ಅಂಶ ಹೊಂದಿರುವ ಕಾರಣ ತೂಕ ಇಳಿಕೆಗೆ ಸಹಾಯ ಮಾಡುತ್ತೆ
ಬೀಟ್ರೂಟ್‌ನಲ್ಲಿ ವಿಟಮಿನ್ ಸಿ, ವಿಟಮಿನ್ ಇ ಸಮೃದ್ಧವಾಗಿದೆ. ಬೀಟ್‌ರೂಟ್ ಜ್ಯೂಸ್ ಕುಡಿಯುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು
ನಿಯಮಿತವಾಗಿ ಹಾಗಲಕಾಯಿ ಜ್ಯೂಸ್ ಕುಡಿಯುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತೆ
ಸೌತೆಕಾಯಿ ತೂಕ ಇಳಿಸಲು ಸಹಾಯ ಮಾಡುತ್ತೆ. ಇದರಲ್ಲಿ ಹೆಚ್ಚಿನ ನೀರಿನ ಅಂಶವಿದೆ. ಕ್ಯಾಲೋರಿಗಳು ಕೂಡ ತುಂಬಾ ಕಡಿಮೆ
ಟೊಮೆಟೊದಲ್ಲಿ ವಿಟಮಿನ್ ಸಿ, ಇ ಮತ್ತು ಬೀಟಾ ಕ್ಯಾರೋಟಿನ್ ಸಮೃದ್ಧವಾಗಿದೆ. ಪ್ರತಿನಿತ್ಯ ಟೊಮೆಟೊ ಜ್ಯೂಸ್ ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಹಲವು ಆರೋಗ್ಯ ಪ್ರಯೋಜಗಳಿವೆ
ಗಮನಿಸಿ: ಇದು ಕೆಲವು ಮಾಧ್ಯಮಗಳನ್ನು ಆಧರಿಸಿದ ಮಾಹಿತಿಯಾಗಿದ್ದು, ಅನುಮಾನಗಳಿದ್ದರೆ, ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ