ಹೂಕೋಸಿನಲ್ಲಿ ವಿಟಮಿನ್ ಸಿ, ಫೈಬರ್ ಮತ್ತು ಸಂಯುಕ್ತಗಳು ಸಮೃದ್ಧವಾಗಿವೆ. ನೈಸರ್ಗಿಕವಾಗಿ ಟಾಕ್ಸಿನ್ ಹೊರಹಾಕಲು ಸಹಾಯ ಮಾಡುತ್ತದೆ.
PINTEREST
ಬ್ಲೂಬೆರ್ರಿ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ. ಇದು ಮೂತ್ರಪಿಂಡಗಳನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುತ್ತದೆ ಮತ್ತು ಉರಿಯೂತವನ್ನು ಕಡಿಮೆ ಮಾಡುತ್ತದೆ.
PINTEREST
ಮೊಟ್ಟೆಯ ಬಿಳಿಭಾಗವು ಉತ್ತಮ ಗುಣಮಟ್ಟದ, ಮೂತ್ರಪಿಂಡ ಸ್ನೇಹಿ ಪ್ರೋಟೀನ್ ಮೂಲವಾಗಿದೆ.
PINTEREST
ಬೆಳ್ಳುಳ್ಳಿ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಸಹಕಾರಿ. ಹಾಗೆಯೇ ಇದು ಮೂತ್ರಪಿಂಡದ ಆರೋಗ್ಯಕ್ಕೆ ಸೂಕ್ತವಾಗಿದೆ.
PINTEREST
ಕೆಂಪು ದೊಣ್ಣೆ ಮೆಣಸಿನಕಾಯಿಯಲ್ಲಿ ವಿಟಮಿನ್ ಎ ಮತ್ತು ಸಿ ಸಮೃದ್ಧವಾಗಿದೆ. ಇದು ಮೂತ್ರಪಿಂಡದ ಕಾರ್ಯವನ್ನು ಬೆಂಬಲಿಸಲು ಸೂಕ್ತವಾಗಿದೆ.
PINTEREST
ಸೇಬಿನಲ್ಲಿ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಅಧಿಕವಾಗಿದ್ದು, ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಮೂತ್ರಪಿಂಡದ ಆರೋಗ್ಯವನ್ನು ನೈಸರ್ಗಿಕವಾಗಿ ಬೆಂಬಲಿಸಲು ಸಹಾಯ ಮಾಡುತ್ತದೆ.
PINTEREST
ಆಲಿವ್ ಎಣ್ಣೆಯಲ್ಲಿ ಆರೋಗ್ಯಕರ ಕೊಬ್ಬು ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇದು ಉರಿಯೂತವನ್ನು ಕಡಿಮೆ ಮಾಡಲು ಮತ್ತು ಮೂತ್ರಪಿಂಡದ ಕಾರ್ಯವನ್ನು ಬೆಂಬಲಿಸಲು ಸಹಾಯ ಮಾಡುತ್ತದೆ.
PINTEREST
ಸಾಲ್ಮನ್ ಮತ್ತು ಬಂಗುಡೆಯಂತಹ ಕೊಬ್ಬಿನ ಮೀನುಗಳಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು ಹೆಚ್ಚಾಗಿರುತ್ತವೆ. ಇದು ಉರಿಯೂತವನ್ನು ಕಡಿಮೆ ಮಾಡುತ್ತದೆ ಹಾಗೂ ಹೃದಯ ಮತ್ತು ಮೂತ್ರಪಿಂಡದ ಆರೋಗ್ಯವನ್ನು ಬೆಂಬಲಿಸುತ್ತದೆ.
PINTEREST
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ.