ಮೊಸರು ಒಂದು ಸೂಪರ್ ಫುಡ್ ಆಗಿದ್ದು, ಇದು ಪೋಷಕಾಂಶಗಳಿಂದ ಸಮೃದ್ಧವಾಗಿರುವುದರಿಂದ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿಯಾಗಿದೆ.
ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು, ಜೀರ್ಣಕಾರಿ ಸಮಸ್ಯೆ ನಿವಾರಿಸಲು, ಮತ್ತು ಚರ್ಮವನ್ನು ಆರೋಗ್ಯಕರವಾಗಿಡಲು ಮೊಸರನ್ನು ಪ್ರತಿದಿನ ಸೇವಿಸಬೇಕು.
ಮೊಸರು ಪ್ರೋಬಯಾಟಿಕ್‌ಗಳನ್ನು ಹೊಂದಿರುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಹೆಚ್ಚಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹ ಮೊಸರು ಪ್ರಯೋಜನಕಾರಿಯಾಗಿದೆ.
ಮೊಸರು ಕ್ಯಾಲ್ಸಿಯಂ ಮತ್ತು ವಿಟಮಿನ್ ಡಿ ಯಿಂದ ಸಮೃದ್ಧವಾಗಿದೆ. ಇದು ಮೂಳೆಗಳು ಮತ್ತು ಹಲ್ಲುಗಳ ಆರೋಗ್ಯಕ್ಕೆ ಪ್ರಯೋಜನಕಾರಿ.
ಮೊಸರಿನಲ್ಲಿ ಕೊಬ್ಬು ಕಡಿಮೆ ಇರುತ್ತದೆ. ಇದು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ. ಇದು ತೂಕ ಇಳಿಕೆಗೂ ಸಹಾಯ ಮಾಡುತ್ತದೆ.
ಮೊಸರು ತಿನ್ನುವುದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ. ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
ಆರೋಗ್ಯವಂತ ವಯಸ್ಕರು ದಿನಕ್ಕೆ 200-250 ಗ್ರಾಂ ಮೊಸರು ಸೇವಿಸುವುದು ಸೂಕ್ತವೆಂದು ಪರಿಗಣಿಸಲಾಗಿದೆ.
ಗಮನಿಸಿ: ಈ ಮಾಹಿತಿಯು ಸಾಮಾನ್ಯ ಜ್ಞಾನ ಹಾಗೂ ಅಂತರ್ಜಾಲದಲ್ಲಿ ಸಿಕ್ಕ ಮಾಹಿತಿಯನ್ನ ಆಧರಿಸಿದೆ. ಈ ವಿಚಾರ ಸಂಪೂರ್ಣ ನಿಖರವಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ಕನ್ನಡ ಪ್ರತಿಪಾದಿಸುವುದಿಲ್ಲ. ಈ ವಿಷಯದ ಕುರಿತ ನಿಖರ ಮಾಹಿತಿಗಾಗಿ ಸಂಬಂಧಪಟ್ಟ ಕ್ಷೇತ್ರದ ತಜ್ಞರನ್ನು ಸಂಪರ್ಕಿಸಿ
Pinterest
RR ವಿರುದ್ಧ ಶತಕ ಸಿಡಿಸಿದ್ದ ಇಶಾನ್ ಕಿಶನ್ LSG ವಿರುದ್ಧ ಗೋಲ್ಡನ್ ಡಕ್