ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಸೇವಿಸುವುದರಿಂದ ಆಗುವ ಲಾಭಗಳು

Pexels

By Priyanka Gowda
Sep 18, 2024

Hindustan Times
Kannada

ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಸೊಪ್ಪನ್ನು ಜಗಿಯುವುದರಿಂದ ಏನೆಲ್ಲಾ ಅದ್ಭುತವಾದ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು ಎಂಬುದು ಇಲ್ಲಿದೆ.

Pexels

ಕೊತ್ತಂಬರಿ ಸೊಪ್ಪು ಬೇಳೆಕಾಳುಗಳು, ತರಕಾರಿಗಳು, ಸಲಾಡ್‌ಗಳು ಮತ್ತು ಪರೋಟ ಸೇರಿದಂತೆ ಪ್ರತಿಯೊಂದು ಭಕ್ಷ್ಯದ ರುಚಿಯನ್ನು ಹೆಚ್ಚಿಸುತ್ತದೆ. 

Pexels

ಕೊತ್ತಂಬರಿ ಸೊಪ್ಪನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ.

Pexels

ಕೊತ್ತಂಬರಿ ಸೊಪ್ಪಿನಲ್ಲಿರುವ ಆಂಟಿ-ಆಕ್ಸಿಡೆಂಟ್‌ಗಳು ದೇಹದಿಂದ ಟಾಕ್ಸಿನ್ ಅನ್ನು ತೆಗೆದುಹಾಕುವ ಮೂಲಕ ಸಹಾಯ ಮಾಡುತ್ತದೆ.

Pexels

ಕೊತ್ತಂಬರಿ ಸೊಪ್ಪಿನಲ್ಲಿರುವ ವಿಟಮಿನ್ ಸಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ಅಲ್ಲದೆ, ಇದು ಕಾಲಜನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ ಮತ್ತು ಚರ್ಮವನ್ನು ಆರೋಗ್ಯಕರವಾಗಿರಿಸುತ್ತದೆ.

Pexels

ಕೊತ್ತಂಬರಿ ಸೊಪ್ಪನ್ನು ಸೇವಿಸುವುದರಿಂದ ತೂಕ ಇಳಿಕೆಗೂ ಸಹಕಾರಿ. ಇದರಲ್ಲಿರುವ ಫೈಬರ್ ಮತ್ತು ಕ್ವೆರ್ಸೆಟಿನ್ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

Pexels

ಕೊತ್ತಂಬರಿ ಸೊಪ್ಪಿನಲ್ಲಿ ಉಪ್ಪನ್ನು ಹೀರಿಕೊಳ್ಳುವ ಗುಣವಿದ್ದು, ಇದು ದೇಹದಿಂದ ಹೆಚ್ಚುವರಿ ಸೋಡಿಯಂ ಅನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. 

Pexels

ಕೊತ್ತಂಬರಿ ಸೊಪ್ಪು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಮತ್ತು ಅಧಿಕ ರಕ್ತದೊತ್ತಡ ಸಮಸ್ಯೆಯನ್ನು ನಿವಾರಿಸಲು ಸಹಕಾರಿ.

freepik

ಜೈಪುರ ಪಿಂಕ್ ಪ್ಯಾಂಥರ್ಸ್​ಗೆ ನೂತನ ನಾಯಕ ಘೋಷಣೆ