ಮಧುಮೇಹ ನಿಯಂತ್ರಿಸಲು ಮೆಂತ್ಯ ಒಳ್ಳೆಯದು. ಇಲ್ಲಿರುವ ಫೈಬರ್ ಕಾರ್ಬೋಹೈಡ್ರೇಟ್‌ಗಳ ಹೀರಿಕೊಳ್ಳುವಿಕೆಯನ್ನು ನಿಧಾನಗೊಳಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ
ಈರುಳ್ಳಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. 100 ಗ್ರಾಂ ಹಸಿ ಈರುಳ್ಳಿ ತಿನ್ನುವುದರಿಂದ ನಾಲ್ಕು ಗಂಟೆಗಳಲ್ಲಿ ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಬಹುದು.
ತೆಂಗಿನೆಣ್ಣೆಯಲ್ಲಿ ಅಡುಗೆ ಮಾಡುವುದರಿಂದ ಕೊಲೆಸ್ಟ್ರಾಲ್ ನಿಯಂತ್ರಣವಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಿಸುವ ಮೂಲಕ ಆಹಾರದ ಪೌಷ್ಟಿಕಾಂಶದ ಮೌಲ್ಯವನ್ನು ಹೆಚ್ಚಿಸುತ್ತದೆ
ಮಧುಮೇಹ ನಿಯಂತ್ರಿಸುವಲ್ಲಿ ನೆಲ್ಲಿಕಾಯಿ ಪಾತ್ರವೂ ಮುಖ್ಯ. ಇದರಲ್ಲಿ ಕ್ರೋಮಿಯಂ ಅಧಿಕವಾಗಿರುತ್ತದೆ. ಇದು ಇನ್ಸುಲಿನ್ ಸಂವೇದನೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ
ಅರಿಶಿನದಲ್ಲಿ ಕರ್ಕ್ಯುಮಿನ್ ಅಂಶವಿದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಲಗುವ ಮುನ್ನ 1 ಚಮಚ ನೆಲ್ಲಿಕಾಯಿ ರಸಕ್ಕೆ 1 ಚಿಟಿಕೆ ಅರಿಶಿನ ಸೇರಿಸಿ ಕುಡಿಯಿರಿ
ಮಧುಮೇಹ ನಿಯಂತ್ರಿಸಲು ದೈಹಿಕ ವ್ಯಾಯಾಮ ಬಹಳ ಮುಖ್ಯ. ಊಟದ ನಂತರ 500 ಹೆಜ್ಜೆಗಳು ನಡೆಯುವುದರಿಂದ ಸ್ನಾಯುಗಳು ಬಲಗೊಳ್ಳುತ್ತವೆ. ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆಯಾಗುವುದನ್ನು ತಡೆಯುತ್ತದೆ
ರಕ್ತದಲ್ಲಿನ ಸಕ್ಕರೆಯ ಮಟ್ಟವು ಸಮತೋಲನದಲ್ಲಿರಬೇಕು. ಇಲ್ಲವಾದಲ್ಲಿ ಇದು ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ
ಗಮನಿಸಿ: ಇದು ಸಾಮಾನ್ಯ ಮಾಹಿತಿಯನ್ನು ಆಧರಿಸಿದ ಬರಹ. ಈ ಕುರಿತ ಹೆಚ್ಚಿನ ಮಾಹಿತಿಗೆ ತಜ್ಞರನ್ನು ಸಂಪರ್ಕಿಸಿ