ಈ ಆಹಾರಗಳು ಜೀರ್ಣಕ್ರಿಯೆಯನ್ನು ಉತ್ತೇಜಿಸಲು ಸಹಕಾರಿ
freepik
By Priyanka Gowda
Sep 02, 2024
Hindustan Times
Kannada
ಮೊಸರು, ಕರುಳಿನ ಬ್ಯಾಕ್ಟೀರಿಯಾವನ್ನು ಸಮತೋಲನಗೊಳಿಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಓಟ್ಸ್‌ನಲ್ಲಿ ನಾರಿನಂಶ ಅಧಿಕವಾಗಿದ್ದು, ಇದು ಮಲಬದ್ಧತೆಯನ್ನು ತಡೆಯುವ ಮೂಲಕ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ.
ಪಪ್ಪಾಯಿಯು ಪಪೈನ್ ಕಿಣ್ವವನ್ನು ಹೊಂದಿದೆ. ಇದರಲ್ಲಿರುವ ಹೆಚ್ಚಿನ ನೀರಿನ ಅಂಶ ಮತ್ತು ಫೈಬರ್ ನಿಯಮಿತ ಕರುಳಿನ ಚಲನೆಯನ್ನು ಉತ್ತೇಜಿಸುತ್ತದೆ ಹಾಗೂ ಮಲಬದ್ಧತೆಯನ್ನು ತಡೆಯುತ್ತದೆ.
ಶುಂಠಿಯು ನೈಸರ್ಗಿಕ ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಜೀರ್ಣಕಾರಿ ಕಿಣ್ವಗಳನ್ನು ಉತ್ತೇಜಿಸುತ್ತದೆ.
ಕಾಮಕಸ್ತೂರಿಯಲ್ಲಿ ಫೈಬರ್ ಅಂಶ ಹೆಚ್ಚಿದ್ದು, ಇದು ಕರುಳಿನ ಚಲನೆಯನ್ನು ನಿಯಂತ್ರಿಸಲು ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಬಾಳೆಹಣ್ಣಿನಲ್ಲಿ ಫೈಬರ್ ಅಧಿಕವಾಗಿದ್ದು, ಜೀರ್ಣಕ್ರಿಯೆಗೆ ಸಹಾಯಕವಾಗಿದೆ. ಕರುಳಿನ ಚಲನೆಯನ್ನು ಉತ್ತೇಜಿಸುವ ಮೂಲಕ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡುತ್ತದೆ.
ಪಾಲಕ್ ಸೊಪ್ಪು, ಎಲೆಕೋಸು ಫೈಬರ್ ಮತ್ತು ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇವು ಜೀರ್ಣಕ್ರಿಯೆಗೆ ಸಹಕಾರಿಯಾಗಿದೆ.
ಪುದೀನಾ ಹೊಟ್ಟೆ ಉಬ್ಬರ, ಅನಿಲದಂತಹ ಸಮಸ್ಯೆಗಳನ್ನು ನಿವಾರಿಸುತ್ತದೆ. ಇದನ್ನು ಸೇವಿಸುವುದರಿಂದ ವಾಕರಿಕೆ ಕಡಿಮೆಯಾಗುವುದಲ್ಲದೆ ಜೀರ್ಣಕ್ರಿಯೆಯನ್ನು ಸರಾಗಗೊಳಿಸುತ್ತದೆ.
ಸೇಬಿನಲ್ಲಿ ಫೈಬರ್ ಅಂಶ ಅಧಿಕವಾಗಿದ್ದು, ಇದು ಜೀರ್ಣಕ್ರಿಯೆಯನ್ನು ನಿಯಂತ್ರಿಸಲು ಮತ್ತು ಕರುಳಿನ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
freepik
ಎಚ್ಚರ!
ನಿಮ್ಮ ನಾಯಿಗೆ ಈ ಆಹಾರಗಳನ್ನು ಯಾವತ್ತೂ ಕೊಡಲೇಬೇಡಿ
PEXELS
ಮುಂದಿನ ಸ್ಟೋರಿ ಕ್ಲಿಕ್ ಮಾಡಿ