ಪ್ರತಿದಿನ ಬೆಳಿಗ್ಗೆ ಅಗಸೆ ಬೀಜ ತಿನ್ನುವುದರಿಂದ ಆರೋಗ್ಯಕ್ಕೆ ಎಷ್ಟೊಂದು ಪ್ರಯೋಜನ 

By Reshma
Sep 23, 2024

Hindustan Times
Kannada

ಅಗಸೆ ಬೀಜದಲ್ಲಿ ಸೋಡಿಯಂ, ಪೊಟ್ಯಾಶಿಯಂ, ಕ್ಯಾಲ್ಸಿಯಂ, ವಿಟಮಿನ್‌ ಸಿ, ವಿಟಮಿನ್ ಡಿ, ಮೆಗ್ನೇಶಿಯಂ ಮುಂತಾದ ಪೋಷಕಾಂಶಗಳು ಹೇರಳವಾಗಿದೆ 

ಆರೋಗ್ಯ ತಜ್ಞರ ಪ್ರಕಾರ ಪ್ರತಿದಿನ ಬೆಳಿಗ್ಗೆ ಖಾಲಿಹೊಟ್ಟೆಯಲ್ಲಿ ಅಗಸೆ ಬೀಜ ಸೇವಿಸುವುದು ಪ್ರಯೋಜನಕಾರಿ. ಇದರಿಂದ ಏನೆಲ್ಲಾ ಪ್ರಯೋಜನಗಳಿವೆ ನೋಡಿ 

ಅಗಸೆ ಬೀಜದಲ್ಲಿರುವ ಉತ್ಕರ್ಷಣ ನಿರೋಧಕ ಅಂಶ ಚರ್ಮವನ್ನು ಹೊಳೆಯುವಂತೆ ಮಾಡುತ್ತದೆ. ಪ್ರತಿದಿನ ಅಗಸೆ ಬೀಜ ತಿನ್ನುವುದರಿಂದ ಚರ್ಮ ಸುಧಾರಿಸುವುದರ ಜೊತೆಗೆ  ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆಗಳು ನಿವಾರಣೆಯಾಗುತ್ತವೆ

ಅಗಸೆ ಬೀಜಗಳು ಹೇರಳವಾಗಿ ಪೊಟ್ಯಾಶಿಯಂ ಅನ್ನು ಹೊಂದಿರುತ್ತವೆ. ಇದು ರಕ್ತದೊತ್ತಡ ನಿಯಂತ್ರಿಸಲು ಸಹಕಾರಿ 

ಪ್ರತಿದಿನ ಅಗಸೆ ಬೀಜ ತಿನ್ನುವುದರಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಇದು ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣವನ್ನು ತಗ್ಗಿಸುತ್ತದೆ 

ಆರೋಗ್ಯ ತಜ್ಞರ ಪ್ರಕಾರ ಅಗಸೆ ಬೀಜ ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರ ಇರಬಹುದು. ಯಾಕೆಂದರೆ ಇದು ರಕ್ತದೊತ್ತಡ ಹಾಗೂ ಕೊಲೆಸ್ಟ್ರಾಲ್ ಅನ್ನು ನಿಯಂತ್ರಣದಲ್ಲಿ ಇಡುತ್ತದೆ 

ಅಗಸೆ ಬೀಜದಲ್ಲಿ ಕಬ್ಬಿಣಾಂಶ ಸಮದ್ಧವಾಗಿದೆ. ಇದು ದೇಹದಲ್ಲಿನ ರಕ್ತಹೀನತೆಯನ್ನು ನಿವಾರಿಸಿ ಗಂಭೀರ ಆರೋಗ್ಯ ಸಮಸ್ಯೆಗಳಿಂದ ದೇಹವನ್ನು ರಕ್ಷಿಸುತ್ತದೆ 

ಪ್ರತಿದಿನ ಬೆಳಿಗ್ಗೆ ಅಗಸೆ ಬೀಜಗಳನ್ನು ಸೇವಿಸುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಇದು ಕೀಲುನೋವಿನ ಸಮಸ್ಯೆಗೂ ಪರಿಹಾರ ನೀಡುತ್ತದೆ. ಇದರಲ್ಲಿರುವ ಕ್ಯಾಲ್ಸಿಯಂ ಮೂಳೆಗಳನ್ನು ಬಲಪಡಿಸುತ್ತದೆ

ತಜ್ಞರ ಪ್ರಕಾರ ಪ್ರತಿದಿನ ಖಾಲಿಹೊಟ್ಟೆಯಲ್ಲಿ ಅಗಸೆ ಬೀಜಗಳನ್ನು ತಿನ್ನುವುದರಿಂದ ದೇಹವು ಬಲಗೊಳ್ಳುತ್ತದೆ. ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ಅನಾರೋಗ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ 

ಈ ಸುದ್ದಿಯು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ. 

ಮೈಸೂರಿನ ದೀಪಾಲಂಕಾರಕ್ಕೆ ಸುಸ್ವಾಗತ