ಬೆಳಗಿನ ಹೊತ್ತು ವಾಕ್ ಮಾಡೋದ್ರಿಂದ ಸಿಗುತ್ತೆ ಇಷ್ಟೆಲ್ಲಾ ಪ್ರಯೋಜನ
By Reshma Jul 11, 2024
Hindustan Times Kannada
ಪ್ರತಿದಿನ ಬೆಳಿಗ್ಗೆ ವಾಕ್ ಮಾಡುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದ್ರಿಂದ ದೇಹ ಫಿಟ್ ಆಗಿರುವುದು ಮಾತ್ರವಲ್ಲ, ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಇವೆ.
ಆರೋಗ್ಯ ತಜ್ಞರ ಪ್ರಕಾರ ಪ್ರತಿದಿನ ಬೆಳಿಗ್ಗೆ ವಾಕ್ ಮಾಡುವುದರಿಂದ ದಿನವಿಡೀ ಚೈತನ್ಯದಿಂದ ಇರಬಹುದು.
ಬೆಳಗಿನ ನಡಿಗೆಯು ನಮ್ಮ ಮನಸ್ಥಿತಿಯನ್ನು ಸುಧಾರಿಸುತ್ತದೆ. ಇದರಿಂದ ಒತ್ತಡ, ಖಿನ್ನತೆ, ಆತಂಕದಂತಹ ಸಮಸ್ಯೆಗಳಿಂದಲೂ ಮುಕ್ತಿ ದೊರೆಯುತ್ತದೆ.
ಪ್ರತಿದಿನ 20 ರಿಂದ 30 ನಿಮಿಷಗಳ ಕಾಲ ವಾಕಿಂಗ್ ಮಾಡುವುದು ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಗೆ ಬಹಳ ಮುಖ್ಯ.
ಬೆಳಗಿನ ಹೊತ್ತು ವಾಕ್ ಮಾಡುವುದು ಪರಿಣಾಮಕಾರಿ ತೂಕ ಇಳಿಕೆಗೂ ಸಹಕಾರಿ.
ಪ್ರತಿದಿನ ಬೆಳಿಗ್ಗೆ ವಾಕ್ ಮಾಡುವುದರಿಂದ ನಿಮ್ಮ ಆರೋಗ್ಯವು ಮೊದಲಿಗಿಂತ ಉತ್ತಮವಾಗಿರುತ್ತದೆ. ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಅನಾರೋಗ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ.
ಬೆಳಗಿನ ವಾಕ್ ಸ್ನಾಯುಗಳನ್ನು ದೃಢವಾಗಿಸುತ್ತದೆ ಮತ್ತು ಇದರಿಂದ ದೇಹ ಸದೃಢವಾಗುತ್ತದೆ.
ಪ್ರತಿದಿನ ಬೆಳಿಗ್ಗೆ ವಾಕ್ ಮಾಡುವುದರಿಂದ ದೇಹದಲ್ಲಿ ಸಂತೋಷದ ಹಾರ್ಮೋನ್ ಉತ್ಪಾದನೆ ಹೆಚ್ಚುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವ್ಯಕ್ತಿಯು ಸಂತೋಷವಾಗಿರುತ್ತಾನೆ. ಮಾನಸಿಕ ಆರೋಗ್ಯವೂ ಚೆನ್ನಾಗಿರುತ್ತದೆ.
ಅಧ್ಯಯನಗಳ ಪ್ರಕಾರ ಪ್ರತಿದಿನ ಬೆಳಿಗ್ಗೆ ವಾಕ್ ಮಾಡುವುದರಿಂದ ಚೆನ್ನಾಗಿ ನಿದ್ದೆ ಬರುತ್ತದೆ. ನಿದ್ರಾಹೀನತೆಯ ಸಮಸ್ಯೆ ಇರುವವರು ಬೆಳಗಿನ ಹೊತ್ತು ವಾಕ್ ಮಾಡಬೇಕು.
ಈ ಮಾಹಿತಿಯು ಸಾಮಾನ್ಯಜ್ಞಾನವನ್ನು ಆಧರಿಸಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ.