ದಾಳಿಂಬೆಯ 9 ಆರೋಗ್ಯ ಪ್ರಯೋಜನಗಳು 

Image Credits : Adobe Stock

By Priyanka Gowda
Apr 16, 2025

Hindustan Times
Kannada

ದಾಳಿಂಬೆ ರುಚಿಕರ ಮಾತ್ರವಲ್ಲ, ಪೋಷಕಾಂಶಗಳಿಂದ ಈ ಹಣ್ಣು ಸಮೃದ್ಧವಾಗಿದೆ. ಇದನ್ನು ತಿನ್ನುವುದರ 9 ಆರೋಗ್ಯ ಪ್ರಯೋಜನಗಳು ಇಲ್ಲಿವೆ.

Image Credits : Adobe Stock

ದಾಳಿಂಬೆಯಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಇವು ನಿಮ್ಮ ದೇಹದಲ್ಲಿನ ಹಾನಿಕಾರಕ ಫ್ರೀ ರಾಡಿಕಲ್‌ಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ಜೀವಕೋಶಗಳನ್ನು ರಕ್ಷಿಸುತ್ತದೆ. 

Image Credits : Adobe Stock

ದಾಳಿಂಬೆಯಲ್ಲಿರುವ ನೈಸರ್ಗಿಕ ಸಂಯುಕ್ತಗಳು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದು ಸಂಧಿವಾತ ಮತ್ತು ಹೃದಯ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

Image Credits : Adobe Stock

ದಾಳಿಂಬೆಯು ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಕೊಲೆಸ್ಟ್ರಾಲ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. 

Image Credits : Adobe Stock

ದಾಳಿಂಬೆಯಲ್ಲಿ ಆಂಟಿಆಕ್ಸಿಡೆಂಟ್‌ಗಳಿದ್ದು, ಇದು ಡಿಎನ್‍ಎ ಹಾನಿಯನ್ನು ತಡೆಗಟ್ಟಲು ಮತ್ತು ಸರಿಪಡಿಸಲು ಸಹಾಯ ಮಾಡುತ್ತದೆ, ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. 

Image Credits : Adobe Stock

ದಾಳಿಂಬೆಯಲ್ಲಿ ನಾರಿನಂಶ ಹೇರಳವಾಗಿದ್ದು, ಜೀರ್ಣಾಂಗ ವ್ಯವಸ್ಥೆಯು ಸರಾಗವಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. ಕರುಳಿನ ಆರೋಗ್ಯವನ್ನು ಬೆಂಬಲಿಸಲು ಸಹಕಾರಿಯಾಗಿದೆ. 

Image Credits : Adobe Stock

ವಿಟಮಿನ್ ಸಿ ಮತ್ತು ಇತರ ಪೋಷಕಾಂಶಗಳಿಂದ ಸಮೃದ್ಧವಾಗಿರುವ ದಾಳಿಂಬೆ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಕಾರಿ.

Image Credits : Adobe Stock

ದಾಳಿಂಬೆ ರಸವು ಮೂತ್ರಪಿಂಡಗಳನ್ನು ರಕ್ಷಿಸುತ್ತದೆ ಮತ್ತು ಮೂತ್ರಪಿಂಡದಲ್ಲಿ ಕಲ್ಲುಗಳು ರೂಪುಗೊಳ್ಳುವುದನ್ನು ತಡೆಯುತ್ತದೆ. 

Image Credits : Adobe Stock

ದಾಳಿಂಬೆಯಲ್ಲಿರುವ ಉತ್ಕರ್ಷಣ ನಿರೋಧಕಗಳು ಮತ್ತು ಜೀವಸತ್ವಗಳು ಚರ್ಮವನ್ನು ತೇವಾಂಶಯುಕ್ತವಾಗಿರಿಸುತ್ತದೆ. ಚರ್ಮ ಸುಕ್ಕುಗಟ್ಟುವಿಕೆಯನ್ನು ತಡೆಯುತ್ತದೆ.

Image Credits : Adobe Stock

ದಾಳಿಂಬೆಯಲ್ಲಿರುವ ಉರಿಯೂತ ನಿವಾರಕ ಹಾಗೂ ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಜ್ಞಾಪಕ ಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.

Image Credits : Adobe Stock

ರಂಬುಟಾನ್ ಹಣ್ಣಿನ ಆರೋಗ್ಯ ಪ್ರಯೋಜನಗಳಿವು