ಬೇಸಿಗೆಯಲ್ಲಿ ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ದೇಹಕ್ಕಾಗುವ 7 ಅದ್ಭುತ ಪ್ರಯೋಜನಗಳಿವು 

By Reshma
May 14, 2024

Hindustan Times
Kannada

ಮಜ್ಜಿಗೆಯಲ್ಲಿ ಹಲವು ರೀತಿಯ ಪೋಷಕಾಂಶಗಳಿದ್ದು, ಇದು ಬೇಸಿಗೆಯಲ್ಲಿ ದೇಹವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. 

ಬೇಸಿಗೆಯಲ್ಲಿ ಪ್ರತಿದಿನ ತಪ್ಪದೇ ಮಜ್ಜಿಗೆ ಕುಡಿಯುವುದರಿಂದ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. 

ಬಿಸಿಲುಗಾಲದಲ್ಲಿ ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಮಲಬದ್ಧತೆ, ಅಜೀರ್ಣ, ಅಸಿಡಿಟಿ, ಅತಿಸಾರ ಮುಂತಾದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. 

ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ದೇಹದಲ್ಲಿ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಇದು ಅನಾರೋಗ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ. 

ಮಜ್ಜಿಗೆಯಲ್ಲಿ ಉತ್ತಮ ಪ್ರಮಾಣದ ವಿಟಮಿನ್‌ ಕಂಡುಬರುತ್ತದೆ. ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. 

ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಮೂಳೆಗಳು ಬಲಗೊಳ್ಳುತ್ತವೆ. ಯಾಕೆಂದರೆ ಮಜ್ಜಿಗೆಯಲ್ಲಿ ಸಾಕಷ್ಟು ಪ್ರಮಾಣದ ಕ್ಯಾಲ್ಸಿಯಂ ಇರುತ್ತದೆ. 

ಮಜ್ಜಿಗೆಯಲ್ಲಿ ಕ್ಯಾಲೊರಿ ಹಾಗೂ ಕೊಬ್ಬಿನಾಂಶ ಕಡಿಮೆ ಇರುತ್ತದೆ. ಹಾಗಾಗಿ ಇದು ತೂಕ ಇಳಿಕೆಗೂ ಸಹಾಯ ಮಾಡುತ್ತದೆ. 

ಪ್ರತಿದಿನ ಮಜ್ಜಿಗೆ ಕುಡಿಯುವುದರಿಂದ ಚರ್ಮದ ಆರೋಗ್ಯವೂ ಸುಧಾರಿಸುತ್ತದೆ. ಏಕೆಂದರೆ ಇದರಲ್ಲಿ ಚರ್ಮಕ್ಕೆ ಪ್ರಯೋಜನಕಾರಿಯಾದ ಉತ್ಕರ್ಷಣ ನಿರೋಧಕಗಳಿವೆ. 

ಬೇಸಿಗೆಯಲ್ಲಿ ನಿರ್ಜಲೀಕರಣವನ್ನು ತಪ್ಪಿಸಲು ಮಜ್ಜಿಗೆ ಸೇವಿಸುವುದು ಉತ್ತಮ ಆಯ್ಕೆ. 

ಗಮನಿಸಿ: ಈ ಸುದ್ದಿಯನ್ನು ಸಾಮಾನ್ಯಜ್ಞಾನವನ್ನು ಆಧರಿಸಿ ಬರೆಯಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿಗಾಗಿ ತಜ್ಞರನ್ನು ಸಂಪರ್ಕಿಸಿ. 

ಕಷ್ಟಪಟ್ಟು ಅಲ್ಲ, ಇಷ್ಟಪಟ್ಟು ಓದಿ; ಪರೀಕ್ಷಾ ಸಿದ್ಧತೆಗೆ 6 ಸಲಹೆಗಳು

Pinterest