PEXELS
ದೈನಂದಿನ ವ್ಯಾಯಾಮವು ಮೆದುಳಿನ ಕಾರ್ಯವನ್ನು ಹೆಚ್ಚಿಸುತ್ತದೆ. ತೂಕ ಇಳಿಕೆಗೂ ಸಹಕಾರಿ. ರೋಗದ ಅಪಾಯವೂ ಕಡಿಮೆ. ಮೂಳೆಗಳು ಮತ್ತು ಸ್ನಾಯುಗಳನ್ನು ಬಲಪಡಿಸುತ್ತದೆ. ಹಾಗೂ ದೈನಂದಿನ ಕಾರ್ಯಗಳನ್ನು ನಿರ್ವಹಿಸುವ ನಿಮ್ಮ ಸಾಮರ್ಥ್ಯವನ್ನು ಸುಧಾರಿಸುತ್ತದೆ.
PEXELS
ಹಣ್ಣುಗಳು ಮತ್ತು ತರಕಾರಿಗಳು ಸೇರಿದಂತೆ ಸಮತೋಲಿತ ಆಹಾರವನ್ನು ತಿನ್ನಿ. ಇದರಿಂದ ಆರೋಗ್ಯಕರ ಕೊಲೆಸ್ಟ್ರಾಲ್ ಮತ್ತು ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ದೇಹಕ್ಕೆ ಅಗತ್ಯ ಪೋಷಕಾಂಶಗಳನ್ನು ಒದಗಿಸುತ್ತದೆ.
PEXELS
ಪ್ರತಿದಿನ 7-9 ಗಂಟೆಗಳ ನಿದ್ದೆ ಮಾಡಬೇಕು. ಇದರಿಂದ ಮನಸ್ಸು ಹಾಗೂ ದೇಹ ಎರಡಕ್ಕೂ ವಿಶ್ರಾಂತಿ ದೊರಕುತ್ತದೆ. ದಿನವನ್ನು ಸಂತೋಷ ಹಾಗೂ ಉಲ್ಲಾಸದಿಂದ ಕಳೆಯಬಹುದು.
PEXELS
ದಿನಕ್ಕೆ ಕನಿಷ್ಠ 2 ಲೀಟರ್ ನೀರು ಕುಡಿಯಬೇಕು. ಇದು ದೇಹದ ತಾಪಮಾನವನ್ನು ನಿಯಂತ್ರಿಸಲು, ಉತ್ತಮ ಜೀರ್ಣಕ್ರಿಯೆ ಮತ್ತು ಟಾಕ್ಸಿನ್ ಹೊರಹಾಕಲು ಸಹಕಾರಿ.
PEXELS
ಅತಿಯಾದ ಮೊಬೈಲ್ ವೀಕ್ಷಣೆಯು ಕಣ್ಣಿನ ಒತ್ತಡಕ್ಕೆ ಕಾರಣವಾಗಬಹುದು. ಇದು ನಿದ್ರೆಗೆ ಅಡ್ಡಿಪಡಿಸಬಹುದು ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗಬಹುದು. ಇದರ ಬದಲು ಪುಸ್ತಕ ಓದುವುದು ಅಥವಾ ಇತರೆ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಿ.
PEXELS
ಮಾನಸಿಕ ಆರೋಗ್ಯ ಮತ್ತು ದೇಹದ ಆರೋಗ್ಯಕ್ಕಾಗಿ ಕುಟುಂಬ ಮತ್ತು ಸ್ನೇಹಿತರಿಗೆ ಸಮಯವನ್ನು ಮೀಸಲಿಡಿ. ಅವರೊಂದಿಗೆ ಮುಕ್ತವಾಗಿ ಮಾತನಾಡಿ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ.
PEXELS
ಉದ್ಯಾನವನದಲ್ಲಿ ನಡಿಗೆ (ವಾಕಿಂಗ್), ವಿಶ್ರಾಂತಿ ಪಡೆಯುವುದು ಮುಂತಾದವುಗಳನ್ನು ತೊಡಗಿಸಿಕೊಳ್ಳುವುದರಿಂದ ಅರಿವಿನ ಕಾರ್ಯವನ್ನು ಹೆಚ್ಚಿಸುತ್ತದೆ, ಒತ್ತಡವನ್ನು ನಿವಾರಿಸುತ್ತದೆ ಮತ್ತು ಉತ್ತಮ ಮಾನಸಿಕ ಆರೋಗ್ಯವನ್ನು ಉತ್ತೇಜಿಸುತ್ತದೆ.
PEXELS
ಒತ್ತಡವನ್ನು ಕಡಿಮೆ ಮಾಡಲು, ಮಾನಸಿಕ ಆರೋಗ್ಯವನ್ನು ಹೆಚ್ಚಿಸಲು ಮತ್ತು ಉತ್ತಮ ಆರೋಗ್ಯಕ್ಕಾಗಿ ಧ್ಯಾನ ಮತ್ತು ಉಸಿರಾಟದ ವ್ಯಾಯಾಮವನ್ನು ಅಭ್ಯಾಸ ಮಾಡಿ.
PEXELS
ಪ್ರತಿದಿನ ಕೆಲವೇ ನಿಮಿಷಗಳ ಧ್ಯಾನವು ಒತ್ತಡವನ್ನು ನಿವಾರಿಸುತ್ತದೆ, ಗಮನವನ್ನು ಹೆಚ್ಚಿಸುತ್ತದೆ ಮತ್ತು ಭಾವನಾತ್ಮಕ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ.
PEXELS
ನಿಮ್ಮ ದೈನಂದಿನ ದಿನಚರಿಯಲ್ಲಿ ವಿರಾಮಗಳನ್ನು ತೆಗೆದುಕೊಳ್ಳಿ. ಹೆಚ್ಚು ಹೊತ್ತು ಕುಳಿತು ಕೆಲಸ ಮಾಡುವವರು ಆಗಾಗ ವಿರಾಮ ತೆಗೆದುಕೊಳ್ಳಬೇಕು. ಕಿಟಕಿಯಿಂದ ಹೊರಗೆ ನೋಡುವುದು ಅಥವಾ 5 ನಿಮಿಷ ನಡೆಯುವುದು ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದು.
PEXELS