ಆಸ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯುತ್ತವೆ; ಮೇ 13ರ ಮಂಗಳವಾರದ ದಿನ ಭವಿಷ್ಯ
By Raghavendra M Y May 12, 2025
Hindustan Times Kannada
ಮೇಷ ರಾಶಿ: ಪ್ರಮುಖ ಕೆಲಸಗಳಲ್ಲಿ ಅಡೆತಡೆಗಳು ನಿವಾರಣೆಯಾಗುತ್ತವೆ. ಹಣಕಾಸಿನ ವಿಷಯಗಳು ತೃಪ್ತಿಕರವಾಗಿರುತ್ತವೆ
ವೃಷಭ ರಾಶಿ: ಕಠಿಣ ಪರಿಶ್ರಮದ ಫಲಿತಾಂಶ ಪಡೆಯುತ್ತೀರಿ. ವಿದ್ಯಾರ್ಥಿಗಳ ಪ್ರಯತ್ನಗಳು ಸಕಾರಾತ್ಮಕವಾಗಿರುತ್ತವೆ
ಮಿಥುನ ರಾಶಿ: ಸಮಯಕ್ಕೆ ಸರಿಯಾಗಿ ಹಣ ಸಿಗದಿದ್ದರೆ ಕೆಲವು ತೊಂದರೆಗಳನ್ನು ಎದುರಿಸಬೇಕಾಗುತ್ತದೆ
ಕಟಕ ರಾಶಿ: ಆಸ್ತಿ ಸಂಬಂಧಿತ ಸಮಸ್ಯೆಗಳು ಬಗೆಹರಿಯುತ್ತವೆ ಮತ್ತು ಲಾಭಗಳು ಸಿಗುತ್ತವೆ
ಸಿಂಹ ರಾಶಿ: ಯೋಜಿತ ವ್ಯವಹಾರಗಳಲ್ಲಿ ಯಶಸ್ಸನ್ನು ಸಾಧಿಸುವಿರಿ. ವಿದ್ಯಾರ್ಥಿಗಳು ಮತ್ತು ನಿರುದ್ಯೋಗಿಗಳಿಗೆ ಶುಭ ಸುದ್ದಿ ಇರಲಿದೆ
ಕನ್ಯಾ ರಾಶಿ: ಕೆಲವು ಕೆಲಸಗಳಲ್ಲಿ ವಿಳಂಬವಾದರೂ, ಅಂತಿಮವಾಗಿ ಪೂರ್ಣಗೊಳ್ಳುತ್ತವೆ. ವಿದ್ಯಾರ್ಥಿಗಳಿಗೆ ಹೆಚ್ಚು ರೋಮಾಂಚನಕಾರಿ ದಿನವಾಗಿರುತ್ತದೆ
ತುಲಾ ರಾಶಿ: ಕೆಲಸಗಳನ್ನು ಉತ್ಸಾಹದಿಂದ ಪೂರ್ಣಗೊಳಿಸುತ್ತೀರಿ. ಖ್ಯಾತಿ ಹೆಚ್ಚಾಗಲಿದೆ. ಮೋಟಾರು ವಾಹನ ಯೋಗವಿದೆ
ವೃಶ್ಚಿಕ ರಾಶಿ: ಯೋಜನೆಯಂತೆ ಕೆಲಸ ಪೂರ್ಣಗೊಳ್ಳುತ್ತದೆ. ಆರ್ಥಿಕ ಸಂಕಷ್ಟಗಳಿಂದ ಹೊರಬರುವಿರಿ
ಧನು ರಾಶಿ: ಸ್ವಲ್ಪ ಆರ್ಥಿಕ ಪ್ರಗತಿ ಇದ್ದರೂ ಸಾಲ ಕೂಡ ಸಿಗುತ್ತದೆ. ಆಸ್ತಿಗೆ ಸಂಬಂಧಿಸಿದ ಬಿಕ್ಕಟ್ಟು ಬಗೆಹರಿಯುತ್ತದೆ
ಮಕರ ರಾಶಿ: ವ್ಯವಹಾರದಲ್ಲಿನ ಸಣ್ಣ ಅಡೆತಡೆಗಳನ್ನು ನಿವಾರಿಸಿಕೊಳ್ಳುತ್ತೀರಿ. ಎಲ್ಲರ ಗೌರವಕ್ಕೆ ಪಾತ್ರರಾಗುತ್ತೀರಿ
ಕುಂಭ ರಾಶಿ: ಕೈಗೊಂಡ ಯಾವುದೇ ಕೆಲಸವನ್ನು ಯಶಸ್ವಿಯಾಗಿ ಪೂರ್ಣಗೊಳಿಸುತ್ತೀರಿ. ಆರ್ಥಿಕವಾಗಿ ಹಿಂದಿನ ದಿನಕ್ಕಿಂತ ಉತ್ತಮವಾಗಿರಲಿದೆ
ಮೀನ ರಾಶಿ: ಹೊಸದಾಗಿ ಕೈಗೆತ್ತಿಕೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ಆಸ್ತಿಗೆ ಸಂಬಂಧಿಸಿದಂತೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗುತ್ತದೆ
ಗಮನಿಸಿ: ಜ್ಯೋತಿಷ್ಯ ಶಾಸ್ತ್ರದ ಲೆಕ್ಕಾಚಾರಕ್ಕೆ ಹಲವು ಸೂತ್ರಗಳಿವೆ. ಇಲ್ಲಿರುವ ಯಾವುದೇ ಶಿಫಾರಸು ಅಥವಾ ಸಲಹೆಗಳನ್ನು ಪಾಲಿಸುವುದು ಓದುಗರ ವಿವೇಚನೆ, ನಂಬಿಕೆಗೆ ಬಿಟ್ಟ ವಿಷಯವಾಗಿರುತ್ತದೆ