ಒಂದೇ ಒಂದು ಸೊಳ್ಳೆಗಳಿಲ್ಲದ ವಿಶಿಷ್ಟ ದೇಶವಿದು 

By Reshma
May 17, 2024

Hindustan Times
Kannada

ಬಿಸಿಲು, ಮಳೆ ಎರಡೂ ಕಾಣಿಸಿಕೊಂಡಾಗ ಸೊಳ್ಳೆಗಳ ಕಾಟವೂ ಹೆಚ್ಚುತ್ತದೆ. ಸೊಳ್ಳೆ ಕಚ್ಚುವುದರಿಂದ ಮಲೇರಿಯಾ, ಡೆಂಗ್ಯೂನಂತಹ ಮಾರಣಾಂತಿಕ ಕಾಯಿಲೆಗಳು ಬರಬಹುದು. 

ಸೊಳ್ಳೆಗಳಿಂದ ಹರಡುವ ರೋಗದಿಂದ ಪ್ರತಿವರ್ಷ ಲಕ್ಷಾಂತರ ಮಂದಿ ತಮ್ಮ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. 

ಪ್ರಪಂಚದಾದ್ಯಂತ ಒಟ್ಟು 3 ಸಾವಿರ ಜಾತಿಯ ಸೊಳ್ಳೆಗಳಿವೆ. ಆದರೆ ಒಂದೇ ಒಂದು ಸೊಳ್ಳೆಗಳೂ ಇಲ್ಲದ ವಿಶಿಷ್ಟ ದೇಶವೊಂದಿದೆ.

ಹೌದು ಅದುವೇ ಉತ್ತರ ಅಟ್ಲಾಂಟಿಕ್‌ ಸಾಗರದಲ್ಲಿರುವ ಐಸ್‌ಲ್ಯಾಂಡ್‌ ದೇಶ. ಇದು ಹಾವು ಮುಕ್ತ ಮಾತ್ರವಲ್ಲ, ಸೊಳ್ಳೆ ಮುಕ್ತ ದೇಶವೂ ಆಗಿದೆ. 

ಐಸ್‌ಲ್ಯಾಂಡ್‌ ವಿಪರೀತ ಚಳಿ ಇರುವ ಪ್ರದೇಶವಾಗಿದೆ. ಅಲ್ಲಿನ ಶೀತ ವಾತಾವರಣದಲ್ಲಿ ಸೊಳ್ಳೆಗಳು ಬದುಕಲು ಸಾಧ್ಯವಿಲ್ಲ. 

ಐಸ್‌ಲ್ಯಾಂಡ್‌ ಹವಾಮಾನವು ಬಹಳ ವೇಗವಾಗಿ ಬದಲಾಗುತ್ತದೆ. ಹವಾಮಾನದಲ್ಲಿನ ತ್ವರಿತ ಬದಲಾವಣೆಯ ಕಾರಣ ಸೊಳ್ಳೆಗಳು ತಮ್ಮ ಜೀವನಚಕ್ರ ಸಾಗಿಸಲು ಸಾಧ್ಯವಿಲ್ಲ. 

ಐಸ್‌ಲ್ಯಾಂಡ್‌ ತಾಪಮಾನ ಇಳಿಕೆ ಆರಂಭವಾದಾಗ ನೀರು ಮಂಜುಗಡ್ಡೆ ರೂಪ ತಾಳುತ್ತದೆ. ನೀರು ಸಂಪೂರ್ಣವಾಗಿ ಹೆಪ್ಪುಗಟ್ಟುವ ಕಾರಣ ಪ್ಯೂಪಾ ಸಂಪೂರ್ಣವಾಗಿ ಅಭಿವೃದ್ಧಿ ಹೊಂದಲು ಸಾಧ್ಯವಿಲ್ಲ. 

ಐಸ್‌ಲ್ಯಾಂಡ್‌ನಲ್ಲಿ ತಾಪಮಾನವು ಮೈನಸ್‌ 38 ಡಿಗ್ರಿಗೆ ಸೆಲ್ಸಿಯಸ್‌ಗೆ ಇಳಿಯುತ್ತದೆ. ಅಂತಹ ಕಡಿಮೆ ತಾಪಮಾನದಲ್ಲಿ ಸೊಳ್ಳೆಗಳು ಸಂತಾನೋತ್ಪತ್ತಿ ಮಾಡುವುದು ಅಸಾಧ್ಯ. 

ಐಸ್‌ಲ್ಯಾಂಡ್‌ನಲ್ಲಿ ಸೊಳ್ಳೆಗಳಿಗೆ ಸಂಬಂಧಿಸಿದ ಒಂದು ಸಿದ್ಧಾಂತವೆಂದರೆ ಈ ದೇಶದ ನೀರು, ಮಣ್ಣು ಮತ್ತು ಸಾಮಾನ್ಯ ಪರಿಸರ ವ್ಯವಸ್ಥೆಯು ರಾಸಾಯನಿಕ ಸಂಯೋಜನೆಯ ಸೊಳ್ಳೆ ಜೀವನವನ್ನು ಬೆಂಬಲಿಸುವುದಿಲ್ಲ. 

ಅದಾಗ್ಯೂ ಐಸ್‌ಲ್ಯಾಂಡ್‌ನ ನೆರೆಯ ದೇಶಗಳಾದ ನಾರ್ವೆ, ಡೆನ್ಮಾರ್ಕ್‌, ಸ್ಕಾಟ್ಲೆಂಡ್‌ ದೇಶಗಳಲ್ಲಿ ಸೊಳ್ಳೆಗಳಿವೆ. 

ತೂಕ ಕಡಿಮೆ ಮಾಡಲು  5 ಸರಳ ಯೋಗಾಸನಗಳು 

Pexel