ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಟೀಕಿಸಲು ಬಳಸುವ 10 ವಿಚಾರಗಳಿವು
By Raghavendra M Y
Apr 22, 2024
Hindustan Times
Kannada
ಒಂದಿಲ್ಲೊಂದು ವಿಚಾರವನ್ನು ಇಟ್ಟುಕೊಂಡು ಪ್ರಧಾನಿ ಮೋದಿ ಅವರು ಕಾಂಗ್ರೆಸ್ ಮತ್ತು ಆ ಪಕ್ಷದ ನಾಯಕರನ್ನು ಟೀಕಿಸುತ್ತಲೇ ಇರುತ್ತಾರೆ
ಕರ್ನಾಟಕದಲ್ಲಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಅವರು ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡುತ್ತಿದ್ದಾರೆ
ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ, ಪ್ರಧಾನಿ ಮೋದಿ ಅವರನ್ನು ಟೀಕಿಸಲು ಬಳಸುವ 10 ವಿಚಾರಗಳು ಇಲ್ಲಿವೆ
ಕರ್ನಾಟಕಕ್ಕೆ ಬರ ಪರಿಹಾರ ನೀಡುವ ವಿಚಾರವನ್ನು ಇಟ್ಟುಕೊಂಡು ಸಿದ್ದರಾಮಯ್ಯ ಕೇಂದ್ರ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದಾರೆ
ಬೆಂಗಳೂರಿನ ಕುಡಿಯುವ ನೀರಿನ ಮೇಕೆದಾಟು ಯೋಜನೆಗೆ ಅನುಮತಿ ಏಕೆ ಕೊಡುತ್ತಿಲ್ಲ ನರೇಂದ್ರ ಮೋದಿ ಅವರೇ ಎಂದು ಪ್ರಶ್ನಿಸಿದ್ದಾರೆ
ನಮ್ಮ ತೆರಿಗೆ ಪಾಲು, ವಿಶೇಷ ಅನುದಾನ, ಬರ ಪರಿಹಾರ ಯಾಕೆ ಇನ್ನು ಬಂದಿಲ್ಲ ಎಂದು ಕೇಳಿದ್ದಾರೆ
ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂತ ಪ್ರಧಾನಿ ಮೋದಿ ಇಡೀ ದೇಶದ ಯುವಕ, ಯುವತಿಯರಿಗೆ ನಂಬಿಸಿದರು. ಆದರೆ ಉದ್ಯೋಗ ಕೊಟ್ಟಿಲ್ಲ
ಮೋದಿಯವರೇ ಯಾಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕೇಳುತ್ತಿದ್ದಾರೆ
ರಸಗೊಬ್ಬರದ ಬೆಲೆಯನ್ನು ಏರಿಸುತ್ತಲೇ ಇದ್ದೀರಿ, ಬೀಜ-ಗೊಬ್ಬರಗಳ ಮೇಲೆ ಜಿಎಸ್‌ಟಿ ಹೇರಿಕೆ ಮಾಡಿದ್ದೀರಿ?
ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿ ರೈತರ ಭೂಮಿಯನ್ನು ಕಾರ್ಪೋರೇಟ್ ಕುಳಗಳಿಗೆ ಮಾರಾಟ ಮಾಡುವ ಹುನ್ನಾರ ಎಂದು ಟೀಕಿಸುತ್ತಿದ್ದಾರೆ
ನವಜಾತ ಶಿಶುವಿನ ಪೋಷಕರು ಮಾಡಲೇಬಾರದಂತಹ 7 ತಪ್ಪುಗಳಿವು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ