ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ರಜತ್ ಪಾಟೀದಾರ್
By Jayaraj
Apr 18, 2025
Hindustan Times
Kannada
ಪಂಜಾಬ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ ತಂಡ ಅಲ್ಪಮೊತ್ತ ಗಳಿಸಿತು.
ಆದರೆ, ಆರ್ಸಿಬಿ ನಾಯಕ ರಜತ್ ಪಾಟೀದಾರ್ ವಿಶೇಷ ದಾಖಲೆ ನಿರ್ಮಿಸಿದ್ದಾರೆ.
ಪಂದ್ಯದಲ್ಲಿ ಅವರು 18 ಎಸೆತಗಳಲ್ಲಿ 23 ರನ್ ಗಳಿಸಿದರು.
ಐಪಿಎಲ್ನಲ್ಲಿ ಆರ್ಸಿಬಿ ಪರ 1000 ರನ್ಗಳ ಗಡಿ ದಾಟಿದ ಭಾರತದ ಕೇವಲ ಮೂರನೇ ಆಟಗಾರ ಎನಿಸಿಕೊಂಡರು.
ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ದೇವದತ್ ಪಡಿಕಲ್ ಮಾತ್ರ ಈ ಸಾಧನೆ ಮಾಡಿದ್ದಾರೆ.
ಇದೇ ವೇಳೆ ಐಪಿಎಲ್ನಲ್ಲಿ ಅತಿ ಕಡಿಮೆ ಇನ್ನಿಂಗ್ಸ್ನಲ್ಲಿ 1000 ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎನಿಸಿಕೊಂಡಿದ್ದಾರೆ.
ರಜತ್ ತಮ್ಮ 30ನೇ ಐಪಿಎಲ್ ಇನ್ನಿಂಗ್ಸ್ನಲ್ಲಿ 1000 ರನ್ ಗಡಿ ದಾಟಿದರು.
ಇದರೊಂದಿಗೆ ಅವರು ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ (31 ಇನ್ನಿಂಗ್ಸ್) ದಾಖಲೆ ಮುರಿದಿದ್ದಾರೆ.
ಗುಜರಾತ್ ಟೈಟನ್ಸ್ ಪರ ಆಡುತ್ತಿರುವ ಸಾಯಿ ಸುದರ್ಶನ್ ಕೇವಲ 25 ಇನ್ನಿಂಗ್ಸ್ಗಳಲ್ಲೇ 1000 ರನ್ ಪೂರೈಸಿ ದಾಖಲೆ ನಿರ್ಮಿಸಿದ್ದಾರೆ.
All Photo: PTI
ರಿಯಲ್ ಎಸ್ಟೇಟ್ನಿಂದ ಲಾಭವಾಗಲಿದೆ; ಮೇ 19ರ ದಿನಭವಿಷ್ಯ
ಮುಂದಿನ ಸ್ಟೋರಿ ಕ್ಲಿಕ್ ಮಾಡಿ