ನಿವೇದಿತಾ ಗೌಡ ಹೊಸ ಫೋಟೋಗಳು; ಮುದ್ದು ರಾಕ್ಷಸಿ ಲುಕ್‌ಗೆ ಫ್ಯಾನ್ಸ್ ಬೆರಗು
By Praveen Chandra B
Mar 18, 2025
Hindustan Times
Kannada
ನಟಿ ನಿವೇದಿತಾ ಗೌಡ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ಈ ಫೋಟೋದಲ್ಲಿ ನಿವೇದಿತಾ ಗೌಡ ತೆಳ್ಳಗೆ ಕಾಣುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳಿದ್ದಾರೆ.
ಪುನೀತ್ ಶ್ರೀನಿವಾಸ್ ಅವರ ನಿರ್ದೇಶನದ ಸೈಕೋ ಥ್ರಿಲ್ಲರ್ ಕಥಾಹಂದರ ಹೊಂದಿದ ಚಿತ್ರ 'ಮುದ್ದು ರಾಕ್ಷಸಿ'. ಈ ಚಿತ್ರದಲ್ಲಿ ನಾಯಕಿಯಾಗಿ ನಿವೇದಿತಾ ನಟಿಸಿದ್ದಾರೆ.
ಬಿಗ್ ಬಜೆಟ್ ನಲ್ಲಿ ನಿರ್ಮಾಣ ಮಾಡುತ್ತಿರುವ ಈ ಚಿತ್ರದಲ್ಲಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸಿದ್ದಾರೆ.
ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿರುವ ಈ ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ ಶೂಟಿಂಗ್ ನಡೆಸಲಾಗಿದೆ.
ವಿಭಿನ್ನ ರೊಮ್ಯಾಂಟಿಕ್ ಲವ್ ಸ್ಟೋರಿ ಜೊತೆಗೆ ಸೈಕೋಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಮುದ್ದುರಾಕ್ಷಸಿ.
ಈ ಚಿತ್ರದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಸಂಗೀತ ಸಂಯೋಜನೆ ಮಾಡಿದ್ದು, ಎ.ಕರುಣಾಕರ್ ಛಾಯಾಗ್ರಾಹಕರಾಗಿ ಕೆಲಸ ಮಾಡಿದ್ದಾರೆ.
ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ- ನಿವೇದಿತಾಗೌಡ ವಿಚ್ಚೇದನ ಪಡೆದ ನಂತರವೂ ಈ ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ.
ರಾಯಲ್ ಎನ್‌ಫೀಲ್ಡ್ ಆಕರ್ಷಕ ಫ್ಲೈಯಿಂಗ್ ಫ್ಲೀ ಎಲೆಕ್ಟ್ರಿಕ್ ಬೈಕ್
ಮುಂದಿನ ಸ್ಟೋರಿ ಕ್ಲಿಕ್ ಮಾಡಿ