ವಿಶ್ವದಾಖಲೆ ನಿರ್ಮಾಣಕ್ಕೆ ವಿರಾಟ್ ಕೊಹ್ಲಿಗೆ ಬೇಕು ಕೇವಲ 58 ರನ್
By Jayaraj
Sep 15, 2024
Hindustan Times
Kannada
ಬಾಂಗ್ಲಾದೇಶ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ವಿಶೇಷ ದಾಖಲೆ ನಿರ್ಮಿಸುವ ಅವಕಾಶವಿದೆ.
ಅದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅವರ ವಿಶ್ವದಾಖಲೆಯನ್ನು ಮುರಿಯಬಹುದು.
ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27,000 ರನ್ ಪೂರೈಸಲು ಕೊಹ್ಲಿಗೆ ಕೇವಲ 58 ರನ್‌ಗಳ ಅಗತ್ಯವಿದೆ.
ಈವರೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 27,000 ರನ್ ತಲುಪಿದ ದಾಖಲೆ ಸಚಿನ್ ಹೆಸರಲ್ಲಿದೆ. ಅವರು ಒಟ್ಟು 623 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದಾರೆ.
ಕೊಹ್ಲಿ ಇದುವರೆಗೆ 591 ಇನ್ನಿಂಗ್ಸ್‌ಗಳಲ್ಲಿ ಆಡಿ 26942 ರನ್ ಕಲೆಹಾಕಿದ್ದಾರೆ.
ಒಂದು ವೇಳೆ ತಮ್ಮ ವಿರಾಟ್ ಮುಂದಿನ ಎಂಟು ಇನ್ನಿಂಗ್ಸ್‌ಗಳಲ್ಲಿ 58 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಚರಿತ್ರೆ ಸೃಷ್ಟಿಯಾಗಲಿದೆ.
ಆ ಮೂಲಕ, ಕ್ರಿಕೆಟ್ ಇತಿಹಾಸದಲ್ಲಿ 600ಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ 27 ಸಾವಿರ ಅಂತಾರಾಷ್ಟ್ರೀಯ ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ.
ಸೆಪ್ಟೆಂಬರ್ 19ರಿಂದ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ.
ದಿನಕ್ಕೆ ಎಷ್ಟು ಬಾರಿ ಅನ್ನ ತಿಂದರೆ ಆರೋಗ್ಯಕ್ಕೆ ಒಳ್ಳೆಯದು
ಮುಂದಿನ ಸ್ಟೋರಿ ಕ್ಲಿಕ್ ಮಾಡಿ